ಬಂಟ್ವಾಳ: ಸಮಾಜವೊಂದು ಆರೋಗ್ಯಕರ ಮತ್ತು ಸೌಹಾರ್ದಯುತವಾಗಿ ಬೆಳವಣಿಗೆ ಕಾಣಬೇಕಾದರೆ ಶಿಕ್ಷಣ ಜನರಿಗೆ ಅತ್ಯಂತ ಮುಖ್ಯ ಎಂದು ಮಣಿಪಾಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಮತ್ತು ಹಳೆವಿದ್ಯಾರ್ಥಿನಿ ಶೃತಿ ಜಿ. ಶೆಣೈ ಹೇಳಿದರು.
ಅವರು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ 70ನೇ ಗಣರಾಜೋತ್ಸವ ಕಾರ್‍ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದರು.
ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟು ಮುನ್ನಡೆಯಬೇಕು. ನಾವು ಆಯ್ಕೆ ಮಾಡಿದ ವಿಷಯವನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕು. ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ತನ್ನನ್ನು ತಾನು ಅಭಿವೃದ್ಧಿ ಪಡಿಸಿಕೊಳ್ಳಲು ನೀಡುವ ಶಿಕ್ಷಣ ದೇಶದ ಅಭಿವೃದ್ಧಿಯನ್ನು ಸಾಧಿಸಲು ಪ್ರೇರಣೆಯಾಗುತ್ತದೆ ಎಂದರು.

ಬಂಟ್ವಾಳ ಎಸ್.ವಿ.ಎಸ್ ಕಾಲೇಜು ಉಪಪ್ರಾಂಶುಪಾಲೆ ಡಾ| ಸುಜಾತ ಹೆಚ್. ಆರ್. ಅಧ್ಯಕ್ಷತೆ ವಹಿಸಿದರು.
ಕಾರ್‍ಯಕ್ರಮದಲ್ಲಿ ಎನ್.ಸಿ.ಸಿ ಅಧಿಕಾರಿ ಲೆ. ಸುಂದರ್, ಬಂಟ್ವಾಳ ಎಸ್.ವಿ.ಎಸ್ ಪ.ಪೂ ಕಾಲೇಜು ವಿದ್ಯಾರ್ಥಿಕ್ಷೇಮಾಪಾಲನಾಧಿಕಾರಿ ಬಾಲಕೃಷ್ಣ ಗೌಡ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ ಎಸ್.ವಿ.ಎಸ್ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲ ಉಪನ್ಯಾಸಕ-ಉಪನ್ಯಾಸಕೇತರ ವರ್ಗದವರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಬಂಟ್ವಾಳ ಎಸ್.ವಿ.ಎಸ್ ಪ.ಪೂ.ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ. ಸ್ವಾಗತಿಸಿದರು. ಬಂಟ್ವಾಳ ಎಸ್.ವಿ.ಎಸ್ ಕಾಲೇಜು ವಿದ್ಯಾರ್ಥಿಕ್ಷೇಮಾಪಾಲನಾಧಿಕಾರಿ ನಾರಾಯಣ ಭಂಡಾರಿ ವಂದಿಸಿ, ಕನ್ನಡ ಉಪನ್ಯಾಸಕ ಕಿಟ್ಟು ರಾಮಕುಂಜ ಕಾರ್‍ಯಕ್ರಮ ನಿರೂಪಿಸಿದರು.