ಬಂಟ್ವಾಳ: ಫೆ.15ರಂದು ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ’ಮತದಾರರ ಸಾಕ್ಷರತಾ ಕ್ಲಬ್’ನ ಆಶ್ರಯದಲ್ಲಿ ಪ್ರಭಾತಫೇರಿ ಕಾರ್ಯಕ್ರಮವನ್ನು ನಡೆಸಲಾಯಿತು. ಸಾಕ್ಷರತಾ ಕ್ಲಬ್‌ನ ಅಧ್ಯಕ್ಷ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ ನಾರಾಯಣ ಭಂಡಾರಿ ಸ್ವಾಗತದೊಂದಿಗೆ, ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲೆ ಡಾ| ಹೆಚ್. ಆರ್. ಸುಜಾತ, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾಲೇಜಿನ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದ್ಧಿ ಹಾಗೂ ಕಾಲೇಜಿನ ಸುಮಾರು 400 ವಿದ್ಯಾರ್ಥಿಗಳು ಭಾಗವಹಿಸಿದ ಪ್ರಭಾತ ಫೇರಿ ಬಂಟ್ವಾಳ ಬೈಪಾಸ್ ಜಂಕ್ಷನ್‌ನಿಂದ ಹೊರಟು ಕಾಲೇಜಿನಲ್ಲಿ ಅಂತ್ಯಗೊಂಡಿತು.


ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಮನವಿ ಮಾಡಿಕೊಂಡ ಈ ಕಾರ್ಯಕ್ರಮಕ್ಕೆ ಬಂಟ್ವಾಳ ನಗರ ಠಾಣೆಯ ಸಿಬಂದ್ಧಿಗಳು ಸಹಕರಿಸಿದರು.