Thursday, February 5, 2026

ಎಸ್.ವಿ.ಎಸ್. ಕಾಲೇಜಿನಲ್ಲಿ ವಿಚಾರ ಸಂಕಿರಣ ’ಸ್ವಚ್ಛ್‌ಸೋಚ್’

ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಸ್ವಚ್ಛ ಭಾರತದ ಪರಿಕಲ್ಪನೆಯನ್ನು ಅರ್ಥಮಾಡಿಕೊಂಡು ತಾವು ತಮ್ಮ ಜೀವನದಲ್ಲಿ ಸ್ವಚ್ಛತೆಯನ್ನು ಪಾಲಿಸುವುದಲ್ಲದೆ ಇತರರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು. ಕಾಯೇನ ವಾಚಾ ಮನಸಾ ಯುವಜನತೆ ಸ್ವಚ್ಛಭಾರತ ಅಭಿಯಾನದಲ್ಲಿ ಪಾಲ್ಗೊಂಡರೆ ಭಾರತ ಸ್ವಸ್ಥ, ಸ್ವಚ್ಛ ಸುಂದರ ದೇಶವಾಗುವುದು ಕಷ್ಟವಲ್ಲ ಎಂಬುದಾಗಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಬೆಲ್ಲಳ ಶ್ರೀ ಗೋಪಿನಾಥ ರಾವ್ ವಿದ್ಯಾರ್ಥಿಗಳಿಗೆ ಕರೆನೀಡಿದರು. ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ಮಂಗಳೂರಿನ ರಾಮಕೃಷ್ಣ ಮಿಶನ್ ಮತ್ತು ವಿವೇಕಾನಂದ ಬಳಗದ ಸಹಯೋಗದಲ್ಲಿ ನಡೆದ ಸ್ವಚ್ಛ್ ಸೋಚ್ ಎಂಬ ವಿಚಾರ ಸಂಕಿರಣದಲ್ಲಿ ಉದ್ಘಾಟನಾ ಸಮಾರಂಭದ ದಿಕ್ಸೂಚಿ ಭಾಷಣದಲ್ಲಿ ಅವರು ಈ ವಿಷಯವನ್ನು ತಿಳಿಸಿದರು. ಎರಡು ಗೋಷ್ಠಿಗಳಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೊದಲಿಗೆ ಪ್ರಾಣಿಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕಿ  ಭಾರತಿ ಭಟ್ ’ಸ್ವಚ್ಛ ಭಾರತದ ಕಡೆ ಒಂದು ನಡೆ’ ಎಂಬ ವಿಚಾರವನ್ನು ಮಂಡಿಸಿದರು. ಸ್ವಚ್ಛತೆಯ ಅಭಿಯಾನ ಪ್ರತಿಯೊಬ್ಬರ ಮನೆಯಿಂದಲೇ ಆರಂಭವಾಗಬೇಕು, ಮುಂದೆ ಇಡೀ ಸಮಾಜ ಮತ್ತು ದೇಶವನ್ನು ಸ್ವಚ್ಛತೆಯಡೆಗೆ ಕೊಂಡೊಯ್ಯವುದು ಸುಲಭ ಎಂಬುದಾಗಿ ಅವರು ನುಡಿದರು. ಎರಡನೆಯ ಗೋಷ್ಠಿಯಲ್ಲಿ ಮಂಗಳೂರಿನ ರಾಮಕೃಷ್ಣ ಮಿಶನ್ ಇಲ್ಲಿನ ಸ್ವಚ್ಛ್ ಸೋಚ್ ವಿಚಾರ ಸಂಕಿರಣದ ಮುಖ್ಯ ಸಂಯೋಜಕರಾದ  ರಂಜನ್ ಬೆಲ್ಲರ್ಪಾಡಿ ಇವರು ’ನಮ್ಮ ಕಸ ನಮ್ಮ ಹೊಣೆ’ ಎಂಬ ಉಕ್ತಿಯಡಿಯಲ್ಲಿ ಕಸವನ್ನು ಸುಲಭವಾಗಿ ಹೇಗೆ ವಿಲೇವಾರಿ ಮಾಡಬಹುದು ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ಪರಿಣಾಮಕಾರಿಯಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ವಹಿಸಿದ್ದರು. ವಿಚಾರ ಸಂಕಿರಣದ ಸಂಯೋಜಕ ಡಾ| ರಮಾನಂದ ಭಟ್ ಸ್ವಾಗತಿಸಿದರು. ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಪೂರ್ಣಿಮಾ ವಂದನಾರ್ಪಣೆ ಗೈದರು ವಾಣಿಜ್ಯಶಾಸ್ತ್ರ ಉಪನ್ಯಾಸಕ ವೆಂಕಟೇಶ್ ಭಟ್ ಸ್ವಚ್ಛತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿನಿ ಕೃತಿ ಕಾರ್ಯಕ್ರಮ ನಿರೂಪಿಸಿದರು.

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...