Wednesday, February 12, 2025

ವಿಟ್ಲದಲ್ಲಿ ಸ್ವಸ್ತಿಕ್ ಕಲೋತ್ಸವ- 2024

ವಿಟ್ಲ : ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇವರ ಸಾರಥ್ಯದಲ್ಲಿ ‘ಸ್ವಸ್ತಿಕ್ ಕಲೋತ್ಸವ 2024’ ಕಾರ್ಯಕ್ರಮ ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಉದ್ಘಾಟಿಸಿದರು. ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಲೋಕ ಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್, ಸಾಜ ರಾಧಾಕೃಷ್ಣ ಆಳ್ವಾ ಪುತ್ತೂರು, ಸೀತಾರಾಮ ರೈ ಪದ್ಮಶ್ರೀ ಸೋಲಾರ್ ಪುತ್ತೂರು, ಅರುಣ್ ಕುವೆಲ್ಲೊ ಮಂಗಳೂರು, ದಿನೇಶ್ ಮೆದು ಪುತ್ತೂರು, ನರ್ಸಪ್ಪ ಪೂಜಾರಿ, ವಿಕಾಸ್ ಪುತ್ತೂರು, ಎಸ್ ಅಭಿಷೇಕ್ ವಿಟ್ಲ, ಮಾಧವ ಮಾವೆ, ತಾರಾನಾಥ ವಿಟ್ಲ, ರಘುಪತಿ ಪೈ ಇವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ವಿಟ್ಲ ಮೆಸ್ಕಾಂ ಪವರ್ ಮೆನ್ ರವರಿಗೆ ಸನ್ಮಾನ, ಬೃಹತ್ ಆಹಾರ ಮೇಳ, ಸಸ್ಯ ಮೇಳ, ಅಂತರ್ ರಾಜ್ಯ ಕಬಡ್ಡಿ ಪಂದ್ಯಾಟ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಅರುಣ್ ವಿಟ್ಲ ಪ್ರಸ್ತಾಪಿಸಿ ಸ್ವಾಗತಿಸಿದರು. ರವಿಪ್ರಕಾಶ್ ವಂದಿಸಿದರು. ಹರೀಶ್ ನಿರೂಪಿಸಿದರು.

More from the blog

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...