Wednesday, January 28, 2026

ಇರಾ: ಸ್ವೀಪ್ ಮಹಿಳಾ ಜಾಗೃತಿ ಅಭಿಯಾನ

ಇರಾ: ಇರಾ ಗ್ರಾಮ ಪಂಚಾಯಿತಿ ಜನಶಿಕ್ಷಣ ಟ್ರಸ್ಟ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳಾ ಜಾಗೃತಿ ಅಭಿಯಾನದ ಸಲುವಾಗಿ ಬೀದಿನಾಟಕ ಕಾರ್ಯಕ್ರಮವನ್ನು ಇರಾ ಕಂಚಿನಡ್ಕಪದವು ಜನವಸತಿ ಕಾಲೋನಿಯಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅವರ ನೇತೃತ್ವದಲ್ಲಿ ನಡೆದು ಮಹಿಳೆಯರು ಸ್ವಾವಲಂಬಿಯಾಗಲು ತಮ್ಮ ಹಕ್ಕಿನ ಬಗ್ಗೆ ಜಾಗೃತಿ ಹೊಂದುವುದು ಅವಶ್ಯಕವಾಗಿದೆ ಎಂದರು.


ಮಂಗಳೂರಿನ ದಯಾನಂದ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಮಹಿಳಾ ಜಾಗೃತಿ ಹಾಗೂ ಸ್ವಚ್ಛತೆಯ ಬಗ್ಗೆ ಇರ ಕೆಂಜಿಲ ಶಾಲೆಯಲ್ಲಿ ಬೀದಿನಾಟಕ ಪ್ರಸ್ತುತಪಡಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ತುಳಸಿ ಪೂಜಾರಿ, ಸವಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲಾ, ಕರ್ನಾಟಕ ಬ್ಯಾಂಕ್ ಸಿಬ್ಬಂದಿ ಭವಿತ್ ಕುಮಾರ್, ಗ್ರಾಮಸ್ಥರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಜನಶಿಕ್ಷಣ ಟ್ರಸ್ಟ್ನ ಚೇತನ್ ಸ್ವಾಗತಿಸಿ, ಕೆಂಜಿಲ ಶಾಲಾ ಮುಖ್ಯೋಪಾದ್ಯಯ ಹರೀಶ್ ಅವರು ವಂದಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...