Wednesday, June 25, 2025

ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆ

ಬಂಟ್ವಾಳ: ರಾಜ್ಯ ಸರಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಒದಗಿಸಿರುವ ಡಿಜಿಟಲ್ ಕಲಿಕಾ ಯೋಜನೆಯಡಿ ಬಂಟ್ವಾಳದ ವಿವಿಧ ಕಾಲೇಜುಗಳಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಹಾಗೂ ಪ್ರಥಮ ಪದವಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಯನ್ನು ವಿತರಿಸಲಾಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಪ್ರಸ್ತಾವನೆಯಂತೆ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್‌ಗೆ 387, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 201, ಸಿದ್ದಕಟ್ಟೆ ಪ್ರಥಮ ದರ್ಜೆ ಕಾಲೇಜಿಗೆ 97, ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 44 ಹಾಗೂ ಕನ್ಯಾನ ಪ್ರಥಮ ದರ್ಜೆ ಕಾಲೇಜಿಗೆ 32 ಟ್ಯಾಬ್ಲೆಟ್ ಪಿಸಿಗಳನ್ನು ಒದಗಿಸಲಾಗಿತ್ತು.

ಆಯಾಯ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಸೇರಿದಂತೆ ಪ್ರಮುಖರು ಸಾಂಕೇತಿಕವಾಗಿ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಿದರು.

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...