Saturday, January 31, 2026

ತಲಪಾಡಿ: ಮಸ್ಜಿದ್ ಆಯಿಷಾ ಉದ್ಘಾಟನೆ

ಬಂಟ್ವಾಳ: ಬಿ.ಸಿ.ರೋಡ್-ತಲಪಾಡಿಯ ಮಾಫತ್ಲಾಲ್ ಲೇಔಟ್‌ನಲ್ಲಿ ನಿರ್ಮಾಣಗೊಂಡ ನೂತನ “ಮಸ್ಜಿದ್ ಆಯಿಷಾ” ಮಸೀದಿಯನ್ನು ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ರವಿವಾರ ಉದ್ಘಾಟನೆ ಮಾಡಿದರು.
ಬಿಎಚ್‌ಬಿ ಗ್ರೂಪ್‌ನಿಂದ ನಿರ್ಮಾಣಗೊಂಡ ಈ ನೂತನ ಮಸೀದಿಯು ತಲಪಾಡಿ ಜುಮಾ ಮಸೀದಿಯ ಅಧೀನಕ್ಕೆ ಒಳಪಟ್ಟಿರುತ್ತದೆ.
ಕಾರ್ಯಕ್ರಮದಲ್ಲಿ ಗೇರು ನಿಗಮದ ಮಾಜಿ ಅಧ್ಯಕ್ಷ, ಬಿಎಚ್‌ಬಿ ಗ್ರೂಪ್‌ನ ಹಾಜಿ ಬಿ.ಎಚ್. ಅಬ್ದುಲ್ ಖಾದರ್, ಧಾರ್ಮಿಕ ಮುಖಂಡರಾದ ಅಥಾವುಲ್ಲಾ ತಂಙಳ್ ಮಂಜೇಶ್ವರ, ಸ್ವಾದಿಕ್ ಹಾಜಿ, ಬಂಟ್ವಾಳ ಖತೀಬ್ ಉಸ್ಮಾನ್ ದಾರಿಮಿ, ತಲಪಾಡಿ ಖತೀಬ್ ಸ್ವಾದಿಖ್ ಅಝ್ಹರಿ ಕೊಪ್ಪ, ಕಣ್ಣೂರು ಮಸೀದಿಯ ಖತೀಬ್ ಅನ್ಸಾರ್ ಫೈಝಿ, ರಿಯಾಝ್ ಬಂಟ್ವಾಳ ಮತ್ತಿತರರು ಭಾಗವಹಿಸಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...