ಬಂಟ್ವಾಳ: ಮಗುಚಿಬಿದ್ದಿದ್ದ ಗ್ಯಾಸ್ ಟ್ಯಾಂಕರ್ ನ್ನು ಸುಮಾರು ತಾಸುಗಳ ಬಳಿಕ ಕ್ರೇನ್ ಮೂಲಕ ಮೇಲಕ್ಕೆತ್ತಿ ರಸ್ತೆಯಿಂದ ಬದಿಗೆ ಸರಿಸಲಾಗಿದೆ.

ಇನ್ನು ಕೆಲವೇ ನಿಮಿಷಗಳಲ್ಲಿ ರಸ್ತೆ ಸುಗಮ ಸಂಚಾರಕ್ಕೆ ಪೋಲೀಸರು ಅವಕಾಶ ನೀಡುವ ಬಗ್ಗೆ ಭರವಸೆ ನೀಡಿದರು.
ಬಂಟ್ವಾಳ ಟ್ರಾಫಿಕ್ ಎಸ್.ಐ.ರಾಜೇಶ್ ಹಾಗೂ ವಿಟ್ಲ ಎಸ್.ಐ. ವಿನೋದ್ ರೆಡ್ಡಿ ನೇತ್ರತ್ವದಲ್ಲಿ ಸಂಪೂರ್ಣ ಟ್ರಾಫಿಕ್ ಬಂದೋಬಸ್ತ್ ಮಾಡಲಾಗಿತ್ತು ಜೊತೆಗೆ ಗ್ಯಾಸ್ ಟ್ಯಾಂಕ್ ಮೇಲಕ್ಕೆ ಎತ್ತಿ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಮಹತ್ತರವಾದ ಜವಾಬ್ದಾರಿಯನ್ನು ಕೂಡ ವಹಿಸಿದ್ದರು.
ಈ ಭಾಗದಲ್ಲಿ ಯಾವುದೇ ರೀತಿಯ ಅಪಾಯವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಂಟ್ವಾಳ ಹಾಗೂ ಪುತ್ತೂರು ವಿಭಾಗದ ಅಗ್ನಿಶಾಮಕ ದಳದ ಎರಡು ವಾಹನಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿತ್ತು.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಮಸೀದಿ ಮುಂಭಾಗ ಗ್ಯಾಸ್ ಟ್ಯಾಂಕರ್ ರಸ್ತೆಗೆ ಅಡ್ಡವಾಗಿ ಉರುಳಿದ ಪರಿಣಾಮ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಅನಿಲ ಕೊಂಡೊಯ್ಯುತ್ತಿದ್ದ ಟ್ಯಾಂಕರ್
ಚಾಲಕನ ನಿಯಂತ್ರಣ ಕಳೆದು ರಸ್ತೆ ಉರುಳಿದೆ. ಇದರಿಂದ ಅನಿಲ ಸೋರಿಗೆ ಉಂಟಾಗುವ ಸಾಧ್ಯತೆಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ಅನಿಲ ಸೋರಿಕೆ ನಿಯಂತ್ರಿಸುವ ತಾಂತ್ರಿಕ ತಂಡ ಸ್ಥಳಕ್ಕೆ ಆಗಮಿಸಿ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದರು.
ಮಧ್ಯೆರಾತ್ರಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಇನ್ನೂ ಮಂಗಳೂರು ಕಡೆಯಿಂದ ಬರುವ ವಾಹನವನ್ನು ಕಲ್ಲಡ್ಕ, ವಿಟ್ಲ ರಸ್ತೆ ಮೂಲಕ ಹಾಗೂ ಬೆಂಗಳೂರು, ಉಪ್ಪಿನಂಗಡಿ ಕಡೆಯಿಂದ ಬರುವ ವಾಹನಗಳನ್ನು ಮಾಣಿ, ಬುಡೋಳಿ, ಕಬಕ ಮೂಲಕ ಬದಲಿ ರಸ್ತೆಯ ವ್ಯವಸ್ಥೆ ಮಾಡಲಾಗಿತ್ತು.
*ರಸ್ತೆಯೂದ್ದಕ್ಕೂ ವಾಹನಗಳ ಸಾಲು ಸಾಲು*
ಮದ್ಯರಾತ್ರಿ ವೇಳೆ ಗ್ಯಾಸ್ ಟ್ಯಾಂಕ್ ರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ರಸ್ತೆಯಲ್ಲಿ ಯಾವುದೇ ವಾಹನಗಳನ್ನು ಸಂಚಾರ ಮಾಡಲು ಅವಕಾಶ ನೀಡಿರಲಿಲ್ಲ.
ಆದರೆ ಬಂಟ್ವಾಳದಿಂದ ಉಪ್ಪಿನಂಗಡಿ ಕಡೆಗೆ ತೆರಳುವ ಘನಗಾತ್ರ ದ ವಾಹನಗಳು ಹಾಗೂ ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುವ ವಾಹನಗಳು ರಸ್ತೆಯ ಬದಿಯಲ್ಲಿ ಸಾಲುಗಟ್ಟಿ ನಿಂತಿರುವ ದೃಶ್ಯ ಗಳು ಕಂಡು ಬಂತು.
