Tuesday, February 3, 2026

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿಯೂ ಟಾಸ್ಕ್ ಫೋರ್ಸ್ ಸಮಿತಿ: ಶಾಸಕ ರಾಜೇಶ್ ನಾಯ್ಕ್ ಸಮಾಲೋಚನೆ ಸಭೆ

ಬಂಟ್ವಾಳ: ಗ್ರಾ.ಪಂ.ಗಳಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಯ ರೀತಿಯಲ್ಲೇ ನಗರ ಸ್ಥಳೀಯಾಡಳಿತ ಪ್ರದೇಶದಲ್ಲೂ ಟಾಸ್ಕ್ ಫೋರ್ಸ್ ಗಳು  ರಚನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲೂ ಸಮಿತಿ ರಚಿಸುವ ಕುರಿತು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬುಧವಾರ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ರಶ್ಮಿ ಎಸ್.ಆರ್. ಹಾಗೂ ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರ ಜತೆ ಸಮಾಲೋಚನೆ ನಡೆಸಿದರು.

ನಗರ ಪ್ರದೇಶದಲ್ಲಿ ವಾರ್ಡ್ ಮಟ್ಟದ ಟಾರ್ಸ್ಪೋರ್ಸ್ ಹಾಗೂ ಬೂತ್ ಮಟ್ಟದ ಸಮಿತಿ ಎಂದು ಎರಡು ಸಮಿತಿಗಳು ರಚನೆಯಾಗಲಿದೆ. ಸರಕಾರದ ನಿರ್ದೇಶನದ ಪ್ರಕಾರ ಆ ಎರಡು ಸಮಿತಿಗಳಿಗೆ ಸದಸ್ಯರನ್ನು ನೇಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ಮುಂದೆ ರೋಗ ಲಕ್ಷಣಗಳಿಲ್ಲದ ಪಾಸಿಟಿವ್ ಪ್ರಕರಣಗಳು ಕಂಡು ಬಂದಲ್ಲಿ ಅವರು ಹೋಮ್ ಕ್ವಾರಂಟೈನ್ ಆಗಲಿದ್ದು, ಆ ಸಮಯದಲ್ಲಿ ಈ ಸಮಿತಿ ಹೆಚ್ಚಿನ ಜವಾಬ್ದಾರಿಗಳಿರುತ್ತದೆ ಎಂದು ತಿಳಿಸಲಾಯಿತು.

More from the blog

ರಾಜ್ಯದ ರೈಲ್ವೆ ಯೋಜನೆಗಳಿಗೆ 7748 ಕೋಟಿ ರೂ. ಅನುದಾನ : ಸಚಿವ ವಿ.ಸೋಮಣ್ಣ

ಬೆಂಗಳೂರು : ರಾಜ್ಯದ ರೈಲ್ವೆ ಯೋಜನೆಗಳಿಗೆ ಬಜೆಟ್‌ನಲ್ಲಿ 7748 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ವಿಚಾರವಾಗಿ ಮಾಹಿತಿ ನೀಡಿದ ಅವರು, 2009ರಿಂದ...

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...