Tuesday, January 27, 2026

ರಾಜ್ಯದ ಇಬ್ಬರಿಗೆ ಸೇರಿ ಒಟ್ಟು 47 ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: ದೆಹಲಿಯಲ್ಲಿ ವರ್ಚ್ಯುವಲ್ ಸಮಾವೇಶದ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶದ ಒಟ್ಟು 47 ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಪ್ರಶಸ್ತಿ ವಿಜೇತ 47 ಶಿಕ್ಷಕರಲ್ಲಿ 18 ಮಂದಿ ಮಹಿಳೆಯರು. ಇದರಲ್ಲಿ ಕರ್ನಾಟಕದ ಇಬ್ಬರು ಶಿಕ್ಷಕರಿದ್ದಾರೆ. ಬೆಳ್ತಂಗಡಿ ತಾಲೂಕಿನ ನಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್, ಕಲಬುರಗಿಯ ಅಪ್ಜಲ್​ಪುರದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್ ಎಂಬ ಶಿಕ್ಷಕರು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಅನನ್ಯ ಕೊಡುಗೆಯನ್ನು ಗುರುತಿಸಿ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಈ ಬಗ್ಗೆ ಟ್ವೀಟ್ ಮಾಡಿದ ರಾಷ್ಟ್ರಪತಿ, ನಾನು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸುತ್ತೇನೆ. ಮಕ್ಕಳ ಶಿಕ್ಷಣದಲ್ಲಿ ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಬದ್ಧತೆಯನ್ನು ಪ್ರಶಂಸಿಸುತ್ತೇನೆ. ನಮ್ಮ ದೇಶದ ಶಿಕ್ಷಕ ಸಮುದಾಯದ ಎಲ್ಲ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಅರ್ಪಿಸುತ್ತೇನೆ ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

More from the blog

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...

Bantwal : ಕೃಷಿ ಭೂಮಿ, ಕೊರಗ ಸಮುದಾಯ ಭವನಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ...