Friday, June 27, 2025

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಸಮಿತಿ ಸದಸ್ಯರಾಗಿ ಪ್ರಧಾನ ಅರ್ಚಕರಾದ ವೇ.ಮೂ.ಮಹೇಶ್ ಭಟ್,ದೇವಿಪ್ರಸಾದ್ ಪೂಂಜಾ ಬರಂಗರೆ, ಸುಧೀರ್ ಕುಮಾರ್, ಕೆ.ಕಾನ್ಸಲೆ,ಕೆ.ಮೋಹನದಾಸ್ ಪೂಜಾರಿ,ನವೀನ್ ಕುಮಾರ್ ಪಣೋಲಿಬೈಲ್, ಅಣ್ಣುನಾಯ್ಕ್ ನಗ್ರಿ,ಸುಜಾತಗಣೇಶ್ ಶೆಟ್ಟಿ,ಬೇಬಿ ಯೋಗೀಶ್ ಪೂಜಾರಿ ಅವರು ನೇಮಕಗೊಂಡಿದ್ದಾರೆ.

ನೂತನ ವ್ಯವಸ್ಥಾಪನಾ ಸಮಿತಿ ಸೋಮವಾರ ದೇವಳದಲ್ಲಿ ಅಧಿಕಾರ ಸ್ವೀಕರಿಸಿದೆ.ಈ ಸಂದರ್ಭ ದೇವಳದ ಆಡಳಿತಾಧಿಕಾರೊಯಾಗಿದ್ದ ತಾರನಾಥ ಸಾಲಿಯಾನ್ ಪಿ.,ಕಾರ್ಯನಿರ್ವಹಣಾಧಿಕಾರಿ ಪ್ರವೀಣ್,ವ್ಯವಸ್ಥಾಪನಾ ಸಮಿತಿಯ ಮಾಜಿ‌ಅಧ್ಯಕ್ಷ ಎ.ಸಿ.ಭಂಡಾರಿ,ಸಜೀಪಮುನ್ನೂರು ಮೂರ್ತೆದಾರರ ಸೇ.ಸ.ಸಂಘದ ಅಧ್ಯಕ್ಷ ಸಂಜೀವಪೂಜಾರಿ ಬೊಳ್ಳಾಯಿ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...