Friday, January 30, 2026

ಬಿ. ಸಿ. ರೋಡ್ ನಲ್ಲಿ ತೆಂಗು ಬೆಳೆ ಮಾಹಿತಿ ಸಂವಾದ

ಬಂಟ್ವಾಳ: ತೆಂಗು ಬೆಳೆಯ ಸೂಕ್ಷ್ಮತೆಯನ್ನು ತಿಳಿದುಕೊಳ್ಳಿ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ತೆಂಗು ಬೆಳೆಗಾರ ಕೊಂಡಾಣ ಚಂದ್ರಶೇಖರ ಗಟ್ಟಿ ಹೇಳಿದರು.

ಅವರು ಜು. 15ರಂದು ಬಿ ಸಿ ರೋಡ್ ರಂಗೋಲಿ ಸಭಾಂಗಣದಲ್ಲಿ ತೋಟಗಾರಿಕೆ ಇಲಾಖೆ ಹಾಗೂ ತೆಂಗು ಉತ್ಪಾದಕರ ಸೌಹಾರ್ಧ ಸಹಕಾರಿ ಆಶ್ರಯದಲ್ಲಿ ನಡೆದ ತೆಂಗು ಬೆಳೆ ಮಾಹಿತಿ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾನು ಸಾಫ್ಟ್ ವೇರ್ ಇಂಜಿನಿಯರ್ ವೃತ್ತಿ ತ್ಯಜಿಸಿ ತೆಂಗಿನ ಕೃಷಿ ಆರಂಭಿಸಿ ಲಕ್ಷಾಂತರ ಆದಾಯ ಪಡೆಯುತ್ತಿದ್ದೇನೆ ಎಂದರು.

ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜೊ ಪ್ರದೀಪ್ ಡಿಸೋಜ ಮಾತನಾಡಿ ಬೆಳೆ ವಿಮೆ, ಬೆಳೆ ಸಮೀಕ್ಷೆ, ತೋಟಗಾರಿಕಾ ಇಲಾಖೆ ಯೋಜನೆಗಳ ಮಾಹಿತಿ ನೀಡಿದರು.

ಸಹಕಾರಿ ಅಧ್ಯಕ್ಷ ರಾಜ್ ಬಂಟ್ವಾಳ್, ನಿರ್ದೇಶಕರಾದ ಪ್ರೇಮನಾಥ ಶೆಟ್ಟಿ, ವಿಠಲ ಸಪಲ್ಯ, ಸದಾಶಿವ ಬಂಗುಳೆ, ಯಾದವ ದರ್ಕಾಸ್, ನಾಗೇಶ್ ಕಲ್ಯಾರ್, ಶ್ರೀಮತಿ ಶಶಿಕಲಾ ಕೆ., ಸಿಇಒ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು. ಕೃಷ್ಣಪ್ಪ ಸಪಲ್ಯ ಅಂತರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...