Sunday, February 1, 2026

ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳ ‘ಹೃದಯ ತಪಾಸಣೆ’ಗೆ ಕ್ರಮ : ಸಚಿವ ಕೆ.ಎನ್‌. ರಾಜಣ್ಣ..

ರಾಜ್ಯದಲ್ಲಿ ಹೃದಯಾಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಸರಣಿ ಪ್ರಕರಣಗಳು ಮುಂದುವರಿದಿವೆ. ಈ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ.

ಹೃದಯಾಘಾತ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಆಸ್ಪತ್ರೆಗಳಲ್ಲಿಯೂ ಹೃದಯಾಘಾತಕ್ಕೆ ಕಾರಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಂಡು ಜಾಗೃತಿ ಮೂಡಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ.

ಅಲ್ಲದೆ, ಹೃದಯಾಘಾತ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಆಸ್ಪತ್ರೆಗಳಲ್ಲಿಯೂ ಈ ಬಗ್ಗೆ ಸಂಬಂಧಿಸಿದ ಸೌಲಭ್ಯ ಒದಗಿಸಲು ಸರ್ಕಾರ ಸಿದ್ಧವಾಗಿದ್ದು, ಜಿಲ್ಲೆಯಲ್ಲಿ ನಡೆದ ಹೃದಯಾಘಾತ ಎನ್ನಲಾದ ಪ್ರಕರಣಗಳ ಬಗ್ಗೆ ತನಿಖೆ ಹಾಗೂ ಮಾಹಿತಿ ಪಡೆಯಲು ಈಗಾಗಲೇ ಹೃದ್ರೋಗ ತಜ್ಞರ ತಂಡ ರಚಿಸಿದ್ದು ವರದಿ ಬಳಿಕ ಮುಂದಿನ ಕ್ರಮದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.

More from the blog

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...

ಇಂದು ಕೇಂದ್ರ ಬಜೆಟ್ ಮಂಡನೆ..

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಇಂದು ಮಂಡಿಸಲಿದ್ದಾರೆ.ಸದನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್‌ ಮಂಡನೆ ಆರಂಭವಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...