Tuesday, February 11, 2025

ಪುನಶ್ಚೇತನ ತರಬೇತಿ

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಬಂಟ್ವಾಳ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಸ್ತ್ರೀ ಶಕ್ತಿ ಗೊಂಚಲು ಗುಂಪುಗಳ ಬಲವರ್ಧನೆಗೆ ಸದಸ್ಯರಿಗೆ ಪುನಶ್ಚೇತನ ತರಬೇತಿ ಕಾರ್ಯಕ್ರಮ ಸ್ತ್ರೀ ಶಕ್ತಿಭವನ ಬಿ.ಸಿ.ರೋಡ್ ಇಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಬಲಾಢ್ಯಗೊಂಡಾಗ ಪ್ರತಿ ಮನೆಯೂ ಆರ್ಥಿಕವಾಗಿ ಸಬಲವಾಗುತ್ತದೆ ಎಂದರು.
ಮಹಿಳೆಯರ ಗುಂಪುಗಳು ಸಕ್ರಿಯವಾಗಿ, ಬೆಳೆಯುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳು ಅವಶ್ಯ ಎಂಬ ನಿಟ್ಟಿನಲ್ಲಿ ಸರಕಾರ ಆಯೋಜನೆ ಮಾಡಿದೆ.
ಎಲ್ಲಾ ಸದಸ್ಯರು ಇದರ ಪ್ರಯೋಜನ ಪಡೆದು ಇತರರಿಗೆ ಪ್ರೇರಣೆಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ, ರಾಜಕೀಯವಾಗಿ ಸಬಲೀಕರಣಕ್ಕೆ ಸ್ತ್ರೀ ಶಕ್ತಿ ಒಕ್ಕೂಟ ಸಹಕಾರಿಯಾಗಿದೆ ಎಂದರು. ಮನೆಯ ಜವಬ್ದಾರಿಯ ಜೊತೆ ಸಂಘಟನೆಯ ಮೂಲಕ ಸಂಘಟನಾತ್ಮಕವಾಗಿ ಬೆಳೆಯುವ ಕ್ರಾಂತಿಕಾರಕ ಬದಲಾವಣೆಗೆ ಸರಕಾರ ಚಿಂತಿಸಿ ಈ ಸವಲತ್ತುಗಳನ್ನು ನೀಡಿದೆ.
ಇಚ್ಛಾಶಕ್ತಿಯ ಮೂಲಕ ಆರ್ಥಿಕವಾಗಿ ಬೆಳೆಯಲು ಸರಕಾರ ನೀಡಿದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಅವರು ಹೇಳಿದರು.

ತಾಲೂಕು‌ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಾತನಾಡಿ ಕಾರ್ಯಕ್ರಮಗಳ ಮೂಲಕ ಇತರ ತಾಲೂಕಿಗೆ ಮಾದರಿಯಾಗಿ ಕೆಲಸ ನಿರ್ವಹಣೆ ಮಾಡುವ ಇಲಾಖೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ. ಬಂಗೇರ, ತಾಲೂಕು ಪಂಚಾಯತ್ ಸದಸ್ಯ ಮಲ್ಲಿಕಾ ಶೆಟ್ಟಿ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ರೇವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಸ್ವಾಗತಿಸಿ,
ಮೇಲ್ವಿಚಾರಕಿ ಶಾಲಿನಿ ವಂದಿಸಿದರು.
ಹಿರಿಯ ಮೇಲ್ವಿಚಾರಕಿ ಭಾರತಿ ಬಿ. ಕಾರ್ಯಕ್ರಮ ನಿರೂಪಿಸಿದರು.

More from the blog

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...