ಬಂಟ್ವಾಳ: ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರದ ನಿರ್ದೇಶನದಂತೆ ತಹಶೀಲ್ದಾರ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆ.16 ರಂದು ಅಮ್ಮುಂಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಲಿದೆ ಎಂದು ತಹಶೀಲ್ದಾರ್ ಕಚೇರಿ ಪ್ರಕಟನೆ ತಿಳಿಸಿದೆ.
ಅ.16 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ತಹಶೀಲ್ದಾರ್ ರಶ್ಮಿ ಎಸ್. ಆರ್.ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮ ದಲ್ಲಿ ವಾಸ್ತವ್ಯ ಹೂಡಲಿದ್ದು, ಈ ಕಾರ್ಯಕ್ರಮ ದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖಾ ಅಧಿಕಾರಿಗಳು ಉಪಸ್ಥಿತರಿರುವವರು.
ಕಂದಾಯ ಇಲಾಖೆ ಹಾಗೂ ಇತರ ಇಲಾಖೆ ಗಳ ಸವಲತ್ತುಗಳನ್ನು ವಿತರಿಸುವ ಕಾರ್ಯಕ್ರಮ ಕೂಡ ಇದೆ ಎಂದು ಅವರು ತಿಳಿಸಿದ್ದಾರೆ.
ಜೊತೆಗೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಇಲ್ಲಿ ಸಮಾಲೋಚನೆ ಮಾಡಬಹುದು ಎಂದು ತಿಳಿಸಿದ್ದಾರೆ.
ಅಮ್ಮುಂಜೆ ಗ್ರಾಮದ ಯಾವುದಾದರೂ ಅಹವಾಲು ಗಳಿದ್ದರೆ ಅ.14 ರೊಳಗೆ ಗ್ರಾಮ ಪಂಚಾಯತ್ , ದೂರುಪೆಟ್ಟಿಗೆ,ಗ್ರಾಮಲೆಕ್ಕಿಗರಿಗೆ ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸುಲು ಕೋರಿದೆ.


