Friday, June 27, 2025

ಇರಾದಲ್ಲಿ ಕಳ್ಳತನ

ಬಂಟ್ವಾಳ: ಮನೆಗೆ ನುಗ್ಗಿ ನಗದು ಕಳವು ಮಾಡಿದ ಘಟನೆ ಮಂಚಿ ಸಮೀಪದ ಇರಾ ಎಂಬಲ್ಲಿ ನಡೆದಿದೆ.
ಇರಾ ಗ್ರಾಮದ ಪಂಜಿಕಲ್ಲು ಸೂತ್ರಬೈಲು ನಿವಾಸಿ ಇಬ್ರಾಹಿಂ ರಿಯಾಜ್ ಎಂಬವರ ಮನೆಗೆ ನುಗ್ಗಿ ಸುಮಾರು 50ಸಾವಿರ ಮೌಲ್ಯದ ಚಿನ್ನಾಭರಣಗಳು ಕಳವು ನಡೆಸಲಾಗಿದೆ.


ಇಬ್ರಾಹಿಂ ರಿಯಾಜ್ ಅವರ ಮನೆಯ ಕಿಟಕಿಯ ಮೂಲಕ ಹಿಂಬದಿಯ ಬಾಗಿಲು ಚಿಲಕ ತೆಗೆದು ಮನೆಯ ಒಳಗೆ ಪ್ರವೇಶ ಮಾಡಿದ ಕಳ್ಳರು ಮನೆಯವರು ಮಲಗಿದ್ದ ಕೋಣೆಯಲ್ಲಿದ್ದ ಗೊದ್ರೇಜ್ ನಲ್ಲಿ ಇಟ್ಟಿದ್ದ 12 ಗ್ರಾಂ ತೂಕದ ಚಿನ್ನದ ಸರ , 4 ಗ್ರಾಂ.ತೂಕದ ಮಗುವಿನ ಬ್ರಾಸ್ ಲೈಟ್ ಹಾಗೂ 200 ರೂ ನಗದು ಹಣವನ್ನು ಕಳವು ಮಾಡಿದ್ದಾರೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಗೆ ಇಬ್ರಾಹಿಂ ರಿಯಾಜ್ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಅದೇ ಸಂದರ್ಭದಲ್ಲಿ ರಿಯಾಜ್ ಅವರ ಮನೆಯ ಹತ್ತಿರ ಇರುವ ಇಸ್ಮಾಯಿಲ್ ಎಂಬವರ ಮನೆಗೆ ನುಗ್ಗಲು ಪ್ರಯತ್ನ ನಡೆಸಿ ವಿಫಲರಾಗಿದ್ದರಾರೆ.
ಸ್ಥಳ ಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಬೇಟಿ ನೀಡಿದ್ದಾರೆ.
ಗ್ರಾಮಾಂತರ ಎಸ್.ಐ.ಪ್ರಸನ್ನ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...