Friday, June 27, 2025

ರಾಷ್ಟ್ರಮಟ್ಟದ ಥ್ರೋಬಾಲ್ ಬಂಟ್ವಾಳ ಭಾಗ್ಯಶ್ರೀ ಪ್ರತಿನಿಧಿಸಿದ್ದ ರಾಜ್ಯ ತಂಡಕ್ಕೆ ಪ್ರಶಸ್ತಿ

ಬಂಟ್ವಾಳ: ಥ್ರೋಬಾಲ್ ಫೆಡರೇಶನ್ ಆಫ್ ಇಂಡಿಯಾ ಹಾಗೂ ಥ್ರೋಬಾಲ್ ಅಸೋಸಿಯೇಶನ್ ಆಫ್ ಹರಿಯಾಣದ ಸಹಯೋಗದಲ್ಲಿ ಹರಿಯಾಣದ ರೋಥಕ್ ನಲ್ಲಿರುವ ಎಂ.ಡಿ.ವಿಶ್ವವಿದ್ಯಾನಿಲಯದಲ್ಲಿ ನಡೆದ ರಾಷ್ಟ್ರಮಟ್ಟದ ಥ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ತಂಡವು ವಿವಿಧ ಬಹುಮಾನಗಳನ್ನು ಗಳಿಸಿದ್ದು, ಬಂಟ್ವಾಳದ ಭಾಗ್ಯಶ್ರೀಯವರು ಕೂಡ ರಾಜ್ಯ ತಂಡವನ್ನು ಪ್ರತಿನಿಧಿಸಿ ಗೆಲುವಿಗೆ ಕಾರಣರಾಗಿದ್ದಾರೆ.

ಬಂಟ್ವಾಳದ ನಿವೃತ್ತ ಎಎಸ್ಐ ಬಾಲಕೃಷ್ಣ ಹಾಗೂ ಗಾಯತ್ರಿ ದಂಪತಿಗಳ ಪುತ್ರಿಯಾಗಿರುವ ಭಾಗ್ಯಶ್ರೀ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ.

ಈ ಚಾಂಪಿಯನ್ ಶಿಪ್ ನಲ್ಲಿ ರಾಜ್ಯ ತಂಡವು ಅತಿ ಕಿರಿಯ ಬಾಲಕಿಯರ ವಿಭಾಗದಲ್ಲಿ ಪ್ರಥಮ, ಅತಿ ಕಿರಿಯ ಬಾಲಕರ ವಿಭಾಗದಲ್ಲಿ ದ್ವಿತೀಯ, ಹಿರಿಯ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದೆ.

ರಾಜ್ಯ ತಂಡದ ಕ್ರೀಡಾಪಟುಗಳು, ತಂಡದ ತರಬೇತುದಾರರು, ಮೇಲ್ವಿಚಾರಕರನ್ನು ಥ್ರೋಬಾಲ್ ಅಸೋಸಿಯೇಶನ್ ಆಫ್ ಕರ್ನಾಟಕದ ಅಧ್ಯಕ್ಷ ಪ್ರಕಾಶ್ ಇ, ಕಾರ್ಯದರ್ಶಿ ಶರಣ್ ಕುಮಾರ್ ನಾಯಕ್, ಖಜಾಂಚಿ ರಾಜೇಶ್ ಟಿ.ಬಿ. ಮತ್ತು ಅಸೋಸಿಯೇಶನ್ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

K. Annamalai – ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಣ್ಣಾಮಲೈ ಆಯ್ಕೆ..

ಅಣ್ಣಾ ಮಲೈಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಅಣ್ಣಾ ಮಲೈ ಅವರು ಪಾಪ್ಯುಲರ್ ಆಗಿದ್ದು, ಯುವ ಕಾರ್ಯಕರ್ತರ ಮನಸ್ಸು ಗೆದ್ದಿರುವ ನಾಯಕನಾಗಿ ಮಿಂಚುತ್ತಿದ್ದಾರೆ. ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಇವರು...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...