Sunday, January 25, 2026

ತುಂಬೆ ವೆಂಟೆಡ್ ಡ್ಯಾಂಗೆ ಭೇಟಿ ನೀಡಿದ ರಾಜ್ಯ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್

ತುಂಬೆ: ರಾಜ್ಯ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ತುಂಬೆ ವೆಂಟೆಡ್ ಡ್ಯಾಂಗೆ ಭೇಟಿ ನೀಡಿ ಪ್ರಸಕ್ತ ನೀರಿನ ಸ್ಥಿತಿಗತಿಯ ಪರಿಶೀಲನೆ ನಡೆಸಿದ್ದಾರೆ.

ತುಂಬೆ ವೆಂಟೆಡ್ ಡ್ಯಾಂಗೆ ಭೇಟಿ ನಂತರ ಮುಖ್ಯ ಕಾರ್ಯದರ್ಶಿ ಮಂಗಳೂರು ನಗರಕ್ಕೆ ನೀರು ಸರಬರಾಜಾಗುವ ತುಂಬೆ ವೆಂಟೆಡ್ ಡ್ಯಾಂಗೆ ಭೇಟಿ ನೀಡಿದರು. ಅಣೆಕಟ್ಟಿನಲ್ಲಿ ನೀರು ಸಂಗ್ರಹ ಮಟ್ಟವನ್ನು ವೀಕ್ಷಿಸಿದ ಅವರು, ಮುಂದಿನ ಬೇಸಿಗೆಯಲ್ಲಿ ನಗರದಲ್ಲಿ ಯಾವುದೇ ರೀತಿ ನೀರಿನ ಕೊರತೆಯಾಗದಂತೆ ನೀರು ಸರಬರಾಜು ಮಾಡಲು ಸೂಚಿಸಿದರು. ಈಗಿನ ವ್ಯವಸ್ಥೆಯಲ್ಲಿ ಅಣೆಕಟ್ಟಿನಲ್ಲಿ 6 ಮೀಟರ್ ಎತ್ತರಕ್ಕೆ ನೀರು ನಿಲ್ಲಿಸುವುದು ಸೂಕ್ತವಾಗಿದೆ. ಇದೇ ಮಟ್ಟದಲ್ಲಿ ನೀರು ನಿಲ್ಲಿಸಿ, ಅಗತ್ಯ ಬಿದ್ದರೆ ರೇಶನಿಂಗ್ ವ್ಯವಸ್ಥೆ ಮೂಲಕ ನೀರು ಸರಬರಾಜು ಮಾಡಲು ಅವರು ಸೂಚಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...