Thursday, July 10, 2025

ತುಂಬೆ : ಸಂವಿಧಾನ ದಿನಾಚರಣೆ

ಬಂಟ್ವಾಳ: ಸಂವಿಧಾನವೆಂದರೆ ದೇಶದ ನಿಯಮ ಸಂಹಿತೆಯಾಗಿದೆ. ನಮ್ಮ ಭಾರತದ ಸಂವಿಧಾನ ರಚನೆಗಾಗಿ ಅದರ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್‌ ಅವರು ಜಾಗತಿಕ ಮಟ್ಟದಲ್ಲಿ ಬೇರೆ ಬೇರೆ ಸಂವಿಧಾನಗಳನ್ನು ಅಧ್ಯಯನ ಮಾಡಿ, ಭಾರತದ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ಒಂದು ಸುಧೀರ್ಘವಾದ ಅತ್ಯುತ್ತಮ ಸಂವಿಧಾನವನ್ನು ಕೊಡುಗೆಯನ್ನಾಗಿ ಕೊಟ್ಟಿರುವರು. ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಹಕ್ಕು, ಕರ್ತವ್ಯ ಇತ್ಯಾದಿಗಳ ಬಗ್ಗೆ ಬಹಳ ಸ್ಪಷ್ಟವಾಗಿ ಹೇಳಲಾಗಿರುವ ಸಂವಿಧಾನದ ಅಡಿಯಲ್ಲೇ ದೇಶದ ಜನತೆ ನಡೆಯಬೇಕಾಗಿರುವುದರಿಂದ ಪ್ರತಿಯೊಬ್ಬರೂ ಅದನ್ನು ಅರಿತುಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳಂತೂ ಸಂವಿಧಾನವನ್ನು ಕಲಿತು ತಿಳಿದುಕೊಳ್ಳುವುದರೊಂದಿಗೆ ದಿನನಿತ್ಯ ಪತ್ರಿಕೆಗಳ ಓದು-ಹಕ್ಕು ಜವಾಬ್ದಾರಿಗಳನ್ನು ಅರಿತು ಮುನ್ನಡೆಯಬೇಕು ಎಂಬುದಾಗಿ ಬಂಟ್ವಾಳ ವಿಭಾಗದ ಎಎಸ್ಪಿ ರಂಜಿತ್‌ಕುಮಾರ್ ಹೇಳಿದರು.
ಅವರು ದ.ಕ. ಜಿಲ್ಲಾ ಪೊಲೀಸ್ ಇಲಾಖೆ ಮತ್ತು ತುಂಬೆ ಪದವಿ ಪೂರ್ವ ಕಾಲೇಜು ಜಂಟಿಯಗಿ ಏರ್ಪಡಿಸಿದ್ದ ಸಂವಿಧಾನ ದಿನ ಜಾಗೃತಿ ಕಾರ್ಯಗಾರದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಂವಿಧಾನ ಕತೃ ಡಾ| ಬಿ.ಆರ್.ಅಂಬೇಡ್ಕರ್‌ ಅವರ ಪುಸ್ತಕ ನೀಡುವ ಮೂಲಕ ಎಎಸ್ಪಿ ರಂಜಿತ್‌ ಕುಮಾರ್‌ ಅವರನ್ನು ಗೌರವಿಸಲಾಯಿತು. ಕಛೇರಿ ಅಧೀಕ್ಷಕ ಅಬ್ದುಲ್‌ ಕಬೀರ್ ಮುಂತಾದವರು ಉಪಸ್ಥಿತರಿದ್ದರು.
ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್‌ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ತುಂಬೆ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ, ಪ್ರಸ್ತಾವನೆಗೈದರು. ಉಪನ್ಯಾಸಕ ಅಬ್ದುಲ್‌ ರಹಿಮಾನ್ ಡಿ.ಬಿ. ವಂದಿಸಿದರು. ಉಪನ್ಯಾಸಕಿ ಕವಿತಾ ಕೆ. ಕಾರ್ಯಕ್ರಮ ನಿರೂಪಿಸಿದರು.

 

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...