Saturday, January 31, 2026

ತುಂಬೆ ಗ್ರಾಪಂ ಅಧ್ಯಕ್ಷರಾಗಿ ಪ್ರವೀಣ್, ಉಪಾಧ್ಯಕ್ಷೆಯಾಗಿ ಜಯಂತಿ ಆಯ್ಕೆ  

ಬಂಟ್ವಾಳ: ತುಂಬೆ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿ ಪ್ರವೀಣ್ ಬಿ. ತುಂಬೆ ಮತ್ತು ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಂತಿ ಅವರು ಆಯ್ಕೆಯಾಗಿದ್ದಾರೆ.

ಒಟ್ಟು 16 ಸದಸ್ಯರನ್ನು ಹೊಂದಿರುವ ತುಂಬೆ ಗ್ರಾಮ ಪಂಚಾಯತ್ ನಲ್ಲಿ 6 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಗೆದ್ದಿದ್ದರೆ, ಎಸ್.ಡಿ.ಪಿ.ಐ. 5, ಕಾಂಗ್ರೆಸ್ 3, ಇಬ್ಬರು ಪಕ್ಷೇತರ ಸದಸ್ಯರು ಗೆದ್ದಿದ್ದರು.

ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಕಿಶೋರ್, ಎಸ್.ಡಿ.ಪಿ.ಐ. ಬೆಂಬಲಿತ ಅಭ್ಯರ್ಥಿಯಾಗಿ ಝಹೂರ್ ಅಹ್ಮದ್, ಪಕ್ಷೇತರ ಅಭ್ಯರ್ಥಿ ಪ್ರವೀಣ್ ಬಿ. ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷೆ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜಯಂತಿ, ಎಸ್.ಡಿ.ಪಿ.ಐ. ಬೆಂಬಲಿತ ಅಭ್ಯರ್ಥಿಯಾಗಿ ಆತಿಕಾ ಬಾನು, ಪಕ್ಷೇತರ ಅಭ್ಯರ್ಥಿ ಶಶಿಕಲಾ ಕೊಟ್ಟಾರಿ ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಪಕ್ಷೇತರ ಅಭ್ಯರ್ಥಿ ಪ್ರವೀಣ್ ಬಿ. ಅವರಿಗೆ ಅವರ ಸಹಿತ ಇಬ್ಬರು ಪಕ್ಷೇತರ ಅಭ್ಯರ್ಥಿಗಳು, ಕಾಂಗ್ರೆಸ್ ಬೆಂಬಲಿತ ಮೂವರು, ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರ ಮತಗಳೊಂದಿಗೆ 7 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು. ಎಸ್.ಡಿ.ಪಿ.ಐ. ಬೆಂಬಲಿತ ಅಭ್ಯರ್ಥಿ ಝಹೂರ್ ಅಹ್ಮದ್ 5, ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಿಶೋರ್ 4 ಮತಗಳನ್ನು ಪಡೆದು ಪರಾಜಯಗೊಂಡರು.

ಉಪಾಧ್ಯಕ್ಷೆ ಸ್ಥಾನದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಂತಿ 6 ಮತಗಳನ್ನು ಪಡೆದು ಉಪಾಧ್ಯಕ್ಷೆಯಾಗಿ ಆಯ್ಕೆಯಾದರು. ಎಸ್.ಡಿ.ಪಿ.ಐ.‌ ಬೆಂಬಲಿತ ಅಭ್ಯರ್ಥಿ ಆತಿಕಾ ಬಾನು 5 ಮತಗಳು, ಪಕ್ಷೇತರ ಅಭ್ಯರ್ಥಿ ಶಶಿಕಲಾ 5 ಮತಗಳನ್ನು ಪಡೆದರು.

ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಗುರುತಿಸಿದ್ದ ನೂತನ ಅಧ್ಯಕ್ಷ ಪ್ರವೀಣ್ ಬಿ. ಕಳೆದ ಅವಧಿಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದರು. ಪಕ್ಷದೊಳಗಿನ ಅಸಮಾಧಾನದಿಂದ ಅವಧಿ ಮುಕ್ತಾಯದ ಮೊದಲೇ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದರಿಂದ ಪ್ರವೀಣ್ ಉಪಾಧ್ಯಕ್ಷ ಸ್ಥಾನ ಕಳೆದುಕೊಂಡಿದ್ದರು.

ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪ್ರವೀಣ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಪ್ರವೀಣ್ ಎದುರು ತನ್ನ ಬೆಂಬಲಿತ ಅಭ್ಯರ್ಥಿಯನ್ನು ಕಣಕಿಲಿಸದೆ ಬೆಂಬಲ ನೀಡಿತ್ತು. ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸದೆ ಪ್ರವೀಣ್ ಅವರಿಗೆ ಬೆಂಬಲ ಸೂಚಿಸಿತ್ತು. ಜೊತೆಗೆ ಬಿಜೆಪಿಯ ಇಬ್ಬರು ಸದಸ್ಯರು ಮತ ಹಾಕುವ ಮೂಲಕ ಪ್ರವೀಣ್ ಗೆಲುವು ಸಾಧಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...