Friday, June 27, 2025

ಸರ್ವೇ ಕಾರ್ಯಕ್ಕೆ ಅಡ್ಡಿ: ಪರಿಹಾರ ನೀಡಿ ಸರ್ವೇ ನಡೆಸಿ ಎಂದ ರೈತರು.

ತುಂಬೆ: ತುಂಬೆ ಡ್ಯಾಮಿನಲ್ಲಿ 7 ಮೀಟರ್ ನೀರು ಸಂಗ್ರಹಿಸಲು ಮುಳುಗಡೆ ಜಮೀನಿನ ಸರ್ವೆ ಕಾರ್ಯಕ್ಕೆ ನಗರಪಾಲಿಕೆ ವತಿಯಿಂದ ಸರ್ವೇ ಕಾರ್ಯಕ್ಕೆ ಸಜೀಪಮುನ್ನೂರು ಗ್ರಾಮದ ಮಲಾಯಿ ಬೆಟ್ಟು ಪ್ರದೇಶಕ್ಕೆ ಸರ್ವೆ ಸಿಬ್ಬಂದಿಗಳು ಆಗಮಿಸಿದ್ದರು ಬಂಟ್ವಾಳ ತಾಲೂಕು ರೈತ ಸಂಘ ಅಧ್ಯಕ್ಷ ಹಾಗೂ ತುಂಬೆ ವೆಂಟೆಡ್ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎಂ. ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಸಂತ್ರಸ್ತ ರೈತರು ಒಟ್ಟು ಸೇರಿ ಸರ್ವೇ ಕಾರ್ಯದಲ್ಲಿ ನಿರತರಾಗಿದ್ದ ಸಿಬ್ಬಂದಿಗಳನ್ನು ಹಿಂದಕ್ಕೆ ಕಳುಹಿಸಿದರು. ಈಗಾಗಲೇ ಐದು ಮೀಟರ್ ಹಾಗೂ 6 ಮೀಟರ್ ನೀರು ಸಂಗ್ರಹಗೊಂಡಾಗ ಸಂತ್ರಸ್ತ ರೈತರಿಗೆ ಎಲ್ಲಾ ದಾಖಲೆಗಳನ್ನು ಒದಗಿಸಿದರು. ಈ ತನಕ ಪರಿಹಾರ ಸಿಕ್ಕಿರುವುದಿಲ್ಲ ಹಾಗೂ ಸರ್ವೆಯ ಬಗ್ಗೆ ಜಮೀನುದಾರರಿಗೆ ಪೂರ್ವ ಮಾಹಿತಿ ನೀಡಿ ಸರ್ವೆಯ ಆದೇಶ ಪತ್ರವನ್ನು ನೀಡಿ ಸರ್ವೇ ಕಾರ್ಯ ನಡೆಸಬೇಕೆಂದು ತಿಳಿಸಲಾಯಿತು. ರೈತ ಮುಖಂಡರಾದ ಲಕ್ಷ್ಮಣ ನರಿಕೊಂಬು, ಸುದೇಶ್ ಮೈಯ್ಯ, ಪಾಣೆಮಂಗಳೂರು ಇದ್ದಿನಬ್ಬ ಕೊಪ್ಪಳ ನಂದಾವರ ಅಣ್ಣಪ್ಪಯ್ಯ ಬುಕಸ ಇಕ್ಬಾಲ್ ಪಡ್ಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯೂಸುಫ್ ಕರಂದಾಡಿ ಶಿವರಾಮ ಬಾ ಸೀತಾಯ ಅದ್ರು ಕು. ಧನಂಜಯ ಶೆಟ್ಟಿ ಪರಾರಿಗುತ್ತು ಪ್ರಸಾದ್ ಶೆಟ್ಟಿ ಧೀರಜ್ ಶೆಟ್ಟಿ ಚಿತ್ರ ಎಸ್. ರೈ, ಅಬ್ದುಲ್ ರಹಿಮಾನ್ ಉದ್ದೊಟ್ಟು ಮೊದಲಾದವರು ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...