Friday, January 30, 2026

ವರತೆ ಪ್ರದೇಶ ಸೇರಿಸಿ ಸರ್ವೆ ಮಾಡಿ ರೈತರಿಗೆ ಪರಿಹಾರ ನೀಡಿ: ಜಿಲ್ಲಾಧಿಕಾರಿ ಗೆ ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ ಮಾ.1: ತುಂಬೆ ಡ್ಯಾಂನಲ್ಲಿ 6.30 ಮೀಟರ್ ನೀರು ಸಂಗ್ರಹಿಸಲು ಜಿಲ್ಲಾಧಿಕಾರಿಗಳ ಆದೇಶದಂತೆ ಸಭೆ ಜರಗಿಸಿ ಮುಳುಗಡೆ ಭೂಮಿಗೆ ಪರಿಹಾರ ನೀಡಲು ಪ್ರಸ್ತಾವನೆ ತಯಾರಾಗುತ್ತಿದ್ದು ಈ ಬಗ್ಗೆ ಕೇಂದ್ರ ಜಲ ಆಯೋಗದ ನಿರ್ದೇಶನದಂತೆ ವರತೆ ಭೂಮಿಗೂ ನ್ಯಾಯೋಚಿತ ಸೂಕ್ತ ಪರಿಹಾರ ಒದಗಿಸುವುದರ ಮೂಲಕ ರೈತರ ಹಿತಾಸಕ್ತಿಯನ್ನು ಕಾಪಾಡುವಂತೆ ವರತೆ ಪ್ರದೇಶ ಸೇರಿಸಿ 7:30 ಮೀಟರ್ಗೆ ರೈತರ ಸಮಕ್ಷಮ ಸರ್ವೆ ನಡೆಸಿ ರೈತರಿಗೆ ಪರಿಹಾರ ಒದಗಿಸಿ ಕೊಡುವಂತೆ ಲಿಖಿತ ಮನವಿಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪಾಡಿಗುತ್ತು ಇವರಿಗೆ ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎo ಸುಬ್ರಹ್ಮಣ್ಯ ಭಟ್ ಕಾರ್ಯದರ್ಶಿ ಸುದೇಶ್ ಮಯ್ಯ ಸಲ್ಲಿಸಿದರು ಮನವಿಗೆ ಸ್ಪಂದಿಸಿದ ಶಾಸಕರು ದೂರವಾಣಿ ಮೂಲಕ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ವರತೆ ಪ್ರದೇಶ ಸೇರಿಸಿ ಸರ್ವೆ ಮಾಡಿಸಿ ರೈತರಿಗೆ ಪರಿಹಾರ ಒದಗಿಸುವಂತೆ ಸೂಚಿಸಿದರು ಜಿಲ್ಲಾಧಿಕಾರಿಗಳು ವರತೆ ಪ್ರದೇಶ ಸೇರಿಸಿ ಸರ್ವೆ ಮಾಡಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...