Thursday, February 13, 2025

ಸೌಹಾರ್ದತೆಯನ್ನು ನಿರ್ಮಾಣ ಮಾಡುವ ಶಕ್ತಿಕೇಂದ್ರವಾಗಲಿ ; ಯು. ಟಿ. ಖಾದರ್

ಬಿ.ಸಿ.ರೋಡ್: ನನ್ನ ಕ್ಷೇತ್ರದಲ್ಲಿ ತುಂಬೆ ಧಾರ್ಮಿಕ ಕ್ಷೇತ್ರ ಮಾತ್ರವಲ್ಲ, ಸೌಹಾರ್ದತೆಯ ಕ್ಷೇತ್ರವಾಗಲಿ. ಈ ದೇವಸ್ಥಾನದಿಂದ ಸೌಹಾರ್ದತೆಯನ್ನು ನಿರ್ಮಾಣ ಮಾಡುವ ಶಕ್ತಿಕೇಂದ್ರವಾಗಲಿ, ಸೌಹಾರ್ದ ಮುಖಾಂತರ ಅಭಿವೃದ್ಧಿಯೂ ಆಗಿದೆ ರಾಜ್ಯವಿಧಾನ ಸಭಾಧ್ಯಕ್ಷ ಯು. ಟಿ. ಖಾದರ್ ತಿಳಿಸಿದರು.

ಅವರು ನೂತನವಾಗಿ ನಿರ್ಮಾಣವಾದ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಫೆಬ್ರವರಿ ೧೮ರಂದು ಪುನಃಪ್ರತಿಷ್ಠೆ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಗುರುವಾರ ನಡೆದ ಧಾರ್ಮಿಕ ಸಭೆಯಲ್ಲಿ ಮುಖ್ಯಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಧಾರ್ಮಿಕ ಸಭೆಯನ್ನು ಉದ್ಘಾಟಿಸಿದ ಸಂಸದ ನಳಿನ್ ಕುಮಾರ್ ಮಾತನಾಡಿ ಒಂದು ಬ್ರಹ್ಮಕಲಶೋತ್ಸವ ಮಾಡುವುದು, ನೋಡುವುದು ಪೂರ್ವಜನ್ಮದ ಪುಣ್ಯದ ಫಲ, ಭಗವಂತನ ಇಚ್ಚೆಯಿಂದ ಈ ಧರ್ಮಕಾರ್ಯ ನಡೆಯುತ್ತಿದೆ. ಈ ಗ್ರಾಮದಲ್ಲಿ ನಿರಂತರವಾಗಿ ಶಿವನನ್ನು ಆರಾಧನೆಯನ್ನು ಮಾಡಿರುವುದರಿಂದ ಈ ಪ್ರದೇಶದಲ್ಲಿ ಪರಮೇಶ್ವರ ನೆಲೆಯಾಗಿದ್ದು ಈ ಊರಿನ ಪುಣ್ಯದ ಫಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಸಭಾಧ್ಯಕ್ಷತೆಯನ್ನು ಉದ್ಯಮಿ ಪ್ರಕಾಶ ಕಾರಂತ ನರಿಕೊಂಬು ವಹಿಸಿದ್ದರು.

ವೇದಿಕೆಯಲ್ಲಿ ಉದ್ಯಮಿ ಬಿಪಿನ್ ರೈ ಮಂಗಳೂರು, ಭಾರತ್ ಆಗ್ರೋವೇಟ್ ಲಿ ಆಡಳಿತ ನಿರ್ದೇಶಕ ಡಾ.ಅರುಣ್ ಕುಮಾರ್ ರೈ, ಓರಿಯೆಂಟಲ್ ಇನ್ಶೂರೆನ್ಸ್ ನಿವೃತ್ತ ರೀಜಿನಲ್ ಮ್ಯಾನೇಜರ್ ಬಿ ಸುಧಾಕರ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಕಾಂಗ್ರೆಸ್ ಸಹಕಾರಿ ಘಟಕದ ಅಧ್ಯಕ್ಷ ಸುದರ್ಶನ್ ಜೈನ್, ಮಹೇಶ್ ಭಟ್ ಮಾಜಿ ಟ್ರಸ್ಟಿ ಶ್ರೀ ಕ್ಷೇತ್ರ ಸುಬ್ರಮಣ್ಯ, ಜೀರ್ಣೋದ್ದಾರ ಹಾಗೂ ಬ್ರಹ್ಮಕಲಸ ಸಮಿತಿಯ ಅಧ್ಯಕ್ಷ ಚಂದ್ರಪ್ರಕಾಶ ಶೆಟ್ಟಿ, ರಾಮಚಂದ್ರ ಸುವರ್ಣ ತುಂಬೆ ಉಪಸ್ಥಿತರಿದ್ದರು. ಪ್ರಚಾರ ಸಮಿತಿ ಸಂಚಾಲಕ ಪ್ರವೀಣ್ ಬಿ ತುಂಬೆ ಸ್ವಾಗತಿಸಿ, ಶಶಿಧರ ಬ್ರಹ್ಮರಕೊಟ್ಲು ಧನ್ಯವಾದವಿತ್ತರು, ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...