Thursday, February 13, 2025

ದ.ಕ.ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನ್ ಚಾಲಕ ಮಾಲಕರ ಸಂಘದಿಂದ ಪ್ರತಿಭಟನೆ

ಬಂಟ್ವಾಳ: ಚುನಾವಣಾ ವಾಹನವಾಗಿ ಬಳಸಲಾಗುವ ಟೂರಿಸ್ಟ್ ಕಾರು, ವ್ಯಾನುಗಳಿಗೆ ಕಳೆದ 2023ರ ವಿಧಾನಸಭಾ ಚುನಾವಣೆಯ ಸಂದರ್ಭ ನೀಡಬೇಕಾಗಿದ್ದ ಬಾಡಿಗೆಯನ್ನು ಇನ್ನೂ ನೀಡಿಲ್ಲ ಎಂದು ಆರೋಪಿಸಿ ಬಂಟ್ವಾಳದ ಆಡಳಿತ ಸೌಧದ ಮುಂಭಾಗ ಟೂರಿಸ್ಟ್ ಕಾರು, ವ್ಯಾನು ಚಾಲಕ, ಮಾಲೀಕರ ಸಂಘದ ಪದಾಧಿಕಾರಿಗಳು, ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಬಳಿಕ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ವ್ಯಾನು ಚಾಲಕ ಮಾಲೀಕರ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ಸದಾನಂದ ನಾವರ, ಈಗಾಗಲೇ ಹಲವು ಬಾರಿ ಮನವಿಯನ್ನು ಸಂಬಂಧಪಟ್ಟವರಿಗೆ ನೀಡಿದ್ದೇವೆ. ಲೋಕಸಭೆ ಚುನಾವಣೆಯಲ್ಲೂ ಇದೇ ರೀತಿ ಮಾಡಿದರೆ, ಒತ್ತಾಯಪೂರ್ವಕವಾಗಿ ವಾಹನಗಳನ್ನು ಸೀಜ್ ಮಾಡಿದರೆ, ವಾಹನಗಳನ್ನು ಕಚೇರಿಯ ಬಳಿ ಇಟ್ಟು ನಾವು ಮರಳುತ್ತೇವೆ. ಈ ಬಾರಿ ವಾಹನಗಳನ್ನು ಬಾಡಿಗೆಗೆ ಪಡೆಯುವ ಸಂದರ್ಭ ಮೊದಲೇ ಎಷ್ಟು ಪಾವತಿ ಎಂಬುದನ್ನು ನಿಗದಿಪಡಿಸಿಕೊಳ್ಳಬೇಕು, ಇಲ್ಲವಾದರೆ ನಾವು ಮೋಸ ಹೋಗಬಹುದು ಎಂದರು.

ಈ ಬಾರಿ ಮೊದಲೇ ಪಾವತಿಯ ಗ್ಯಾರಂಟಿ ಕೊಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಕಳೆದ 2023ರ ವಿಧಾನಸಭಾ ಚುನಾವಣೆಗೆ ವಿವಿಧ ಇಲಾಖೆಗಳಿಗೆ ನಮ್ಮ ಟೂರಿಸ್ಟ್ ವಾಹನಗಳಲ್ಲಿ ವಶಪಡಿಸಿ, ಸರಕಾರದ ಆದೇಶ ಪ್ರಕಾರ ಪಾವತಿ ನೀಡುವುದಾಗಿ ತಿಳಿಸಿದ್ದಾರೆ. ಕಾರಿಗೆ 2700 ರೂ, ವ್ಯಾನು 3800, ಮಿನಿಬ ಬಸ್ 8,200 ರೂ ನೀಡುವುದಾಗಿ ತಿಳಿಸಿದ್ದರು. ಆದರೆ ಹೇಳಿದ ಪ್ರಕಾರ, ಕಾರ್ಯನಿರ್ವಹಿಸಿದ ಎಲ್ಲ ಚಾಲಕರಿಗೆ ಬಾಡಿಗೆ ನೀಡದೆ ತೊಂದರೆ ಉಂಟುಮಾಡಿದೆ ಎಂದು ಆರೋಪಿಸಿದರು.

ಈ ಸಂದರ್ಭ ಟೂರಿಸ್ಟ್ ಕಾರು ಚಾಲಕ ಮಾಲೀಕರ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್, ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಶನ್ ಗೌರವಾಧ್ಯಕ್ಷ ಇಕ್ಬಾಲ್ ಬಿ.ಸಿ.ರೋಡ್, ಪ್ರಮುಖರಾದ ವಿನ್ಸೆಂಟ್ ರೋಡ್ರಿಗಸ್, ಸುನಿಲ್ ಲೋಬೊ, ವಿಠಲ ರೈ, ಸುರೇಶ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

More from the blog

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ಶಾರದಾ ಸಭಾಭವನ ರಾಮಲ್ಕಟ್ಟೆ ತುಂಬೆಯಲ್ಲಿ ನಡೆಯಿತು. ಪುರ್ವಾನ್ಹ ವಾರ್ಷಿಕೋತ್ಸವವನ್ನು ಸಂಘದ ಅಧ್ಯಕ್ಷರಾದ ಶಿವಕುಮಾರ್ ಉದ್ಘಾಟಿಸಿದರು. ಅಪರಾನ್ಹ 3 ಘಂಟೆಗೆ...

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...