Friday, July 4, 2025

ಝಿರೋ ಟ್ರಾಫಿಕ್ ಗೆ ನೆರವಾದ ಜಿಲ್ಲೆಯ ಜನತೆಗೆ ಪೋಲೀಸರಿಂದ ಧನ್ಯವಾದ

ಬಂಟ್ವಾಳ: ಝಿರೋ ಟ್ರಾಫಿಕ್ ಗೆ ನೆರವಾದ ಜಿಲ್ಲೆಯ ಜನತೆಗೆ ಪೋಲೀಸರು ಧನ್ಯವಾದ ಹೇಳಿದ್ದಾರೆ.

ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ೪೦ ದಿನಗಳ ಸೈಫುಲ್ ಅಝ್ಮಾನ್ ಎಂಬ ಮಗುವನ್ನು ಗುರುವಾರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ಝೀರೊ ಟ್ರಾಫಿಕ್ ನಲ್ಲಿ ಸಾಗಿಸಬೇಕಿತ್ತು.
ಆದರೆ ಮಂಗಳೂರಿನಿಂದ ಬೆಂಗಳೂರುವೆರಗೂ ಜನರು ಉತ್ತಮ ಸಹಕಾರ ನೀಡಿದ್ದಾರೆ, ಎಂದು ಪೋಲೀಸರು ತಿಳಿಸಿದ್ದಾರೆ.
ಫರಂಗಿಪೇಟೆಯಿಂದ ಉಪ್ಪಿನಂಗಡಿವರೆಗೆ ಆ್ಯಂಬುಲೆನ್ಸ್ ಸಾಗುವುದಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ನೆರವಾಗಿದ್ದಾರೆ.
ಬಂಟ್ವಾಳ ಸಂಚಾರಿ ಪಿಎಸ್ಐ ರಾಮ ನಾಯ್ಕ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬಂದಿ ಅಧಿಕ ವಾಹನದೊತ್ತಡ ಇರುವ ಫರಂಗಿಪೇಟೆ, ಕೈಕಂಬ, ಬಿ.ಸಿ.ರೋಡು, ಮೆಲ್ಕಾರ್, ಕಲ್ಲಡ್ಕ, ಮಾಣಿ ಪ್ರದೇಶದಲ್ಲಿ ಆ್ಯಂಬುಲೆನ್ಸ್ ಸಾಗುವುದಕ್ಕೆ ಸಹಕರಿಸಿದ್ದಾರೆ.
ಒಟ್ಟು 18 ಟ್ರಾಫಿಕ್ ಪೋಲೀಸರು, ನಗರ ,ಗ್ರಾಮಾಂತರ ಪೋಲಿಸರ ಜೊತೆ ಗೃಹರಕ್ಷಕದಳ ಹಾಗೂ ಸಾರ್ವಜನಿಕರು ಕೂಡ ಪೊಲೀಸರಿಗೆ ನೆರವಾಗಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ.
ಕೇವಲ ಸಾಮಾಜಿಕ ಜಾಲತಾಣದ ಸಂದೇಶಗಳ ಮೂಲಕ ಅತೀ ಹೆಚ್ಚಿನ ಸಹಕಾರ ದೊರೆತಿದೆ ಎಂದು ಅವರು ಹೇಳಿದ್ದಾರೆ

More from the blog

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...

Bantwal : ನೇತ್ರಾವತಿ ‌ನದಿಯಲ್ಲಿ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆ : ಗುರುತು ಪತ್ತೆಗೆ ಮನವಿ..

ಬಂಟ್ವಾಳ: ಇಲ್ಲಿನ‌ ನೇತ್ರಾವತಿ ‌ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ‌ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು...