Monday, January 26, 2026

ಸೌದಿಗೆ ತೆರಳಬೇಕಿದ್ದ ಯುವಕ ರೈಲು ಢಿಕ್ಕಿ ಹೊಡೆದು ಸಾವು

ಉಳ್ಳಾಲ: ಉದ್ಯೋಗ ನಿಮಿತ್ತ ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಸಂಭವಿಸಿದೆ

ಉಚ್ಚಿಲ ರೈಲ್ವೇ ಗೇಟ್‌ ಸಮೀಪದ ಹಸೈನಾರ್‌ ಅವರ ಪುತ್ರ ಜಾಫರ್‌ ಮೃತರು.

ಅವರು ಮನೆ ಕಡೆಗೆ ತೆರಳಲು ರೈಲ್ವೇ ಹಳಿಯನ್ನು ದಾಟುವ ಸಂದರ್ಭ ರೈಲು ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇತ್ತೀಚೆಗಷ್ಟೇ ಊರಿಗೆ ಬಂದಿದ್ದ ಜಾಫರ್‌, ಸೌದಿ ವೀಸಾ ಬಂದಿರುವ ಹಿನ್ನೆಲೆಯಲ್ಲಿ ಫೆ. 14ರಂದು ಸೌದಿ ರಾಷ್ಟ್ರಕ್ಕೆ ಉದ್ಯೋಗದ ನಿಮಿತ್ತ ತೆರಳುವವರಿದ್ದರು.

ಈ ಬಗ್ಗೆ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...

ಕಟೀಲು 7 ಮೇಳಗಳ ಜ.22ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.22ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.22ರ ಸೇವೆಯಾಟಗಳ ವಿವರ : ಅಪ್ಪಿ ಶೆಡ್ತಿ, ಕಲ್ಲಂಜೆ ಬಾಳಿಕೆ, ಸೂರಿಂಜೆ,...

ಶಿಕ್ಷಣ ಸಂಸ್ಥೆಗಳ ಪರಿಸರದ ಅಂಗಡಿಗಳ ತಪಾಸಣೆ ತೀವ್ರಗೊಳಿಸಲು ಜಿಲ್ಲಾಧಿಕಾರಿ ಸೂಚನೆ..

ಮಂಗಳೂರು : ಶಾಲಾ ಕಾಲೇಜುಗಳ ಸುತ್ತಮುತ್ತ ಕಾರ್ಯಾಚರಿಸುವ ಅಂಗಡಿಗಳಲ್ಲಿ ಮಾದಕ ವಸ್ತು ಮತ್ತು ಧೂಮಪಾನ ಮಾರಾಟದ ಬಗ್ಗೆ ನಿರಂತರ ತಪಾಸಣೆ ನಡೆಸುವಂತೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚನೆ ನೀಡಿದ್ದಾರೆ. ನಾರ್ಕೋ ಕೋ ಆರ್ಡಿನೇಶನ್ ಸೆಂಟರ್‌ನ...

ಕಟೀಲು 7 ಮೇಳಗಳ ಜ.21ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.21ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.21ರ ಸೇವೆಯಾಟಗಳ ವಿವರ : ದಿ। ಶೇಖರ ಶೆಟ್ರ ಸ್ಮರಣಾರ್ಥ ರಾಜೀವಿ...