Monday, January 26, 2026

ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ- ರಾಜೇಶ್ ಬಿ

ಮಂಗಳೂರು : ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯ ವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ಅರಣ್ಯ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸುರತ್ಕಲ್ ಕೋಡಿಕೆರೆ (ಎಸ್ ಟಿ ಪಿ )ಯಲ್ಲಿ ವನಮಹೋತ್ಸವ ಹಾಗೂ 50 ಗಿಡಗಳನ್ನು ನೆಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜಾಗತಿಕ ತಾಪಮಾನ ಏರಿಕೆ, ಹವಾಮಾನದ ವೈಪರೀತ್ಯಗಳು ಸೇರಿದಂತೆ ಪರಿಸರದಲ್ಲಿನ  ಸವಾಲುಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಗಳಲ್ಲಿ ಹಾಗೂ ಸಮಾಜದಲ್ಲಿ ಸಾಮಾಜಿಕ ವಾಗಿ ಜಾಗೃತಿ ಮೂಡಿಸಬೇಕಾಗಿದೆ. ಮಂಗಳೂರು ನಗರದಲ್ಲಿ 25ಸಾವಿರ ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದೆ ಮತ್ತು ಈ ಗಿಡಗಳನ್ನು ನೆಟ್ಟು ಸಂರಕ್ಷಣೆಯ ನಿಗಾವಹಿಸುವ ಬಗ್ಗೆ ಮಾಹಿತಿ ಸಂಗ್ರಹಿಸ ಲಾಗುತ್ತಿದೆ.ಈಗಾಗಲೇ ಸುಮಾರು 9000 ಗಿಡಗಳನ್ನು ಅರಣ್ಯ ಇಲಾಖೆ ಯವತಿಯಿಂದ ನೆಡಲಾಗಿದೆ.ಈ ನಿಟ್ಟಿನಲ್ಲಿ ಸಾಮೂಹಿಕ ಸಹಭಾಗಿತ್ವ ದ ಅಗತ್ಯವಿದೆ ಎಂದು ರಾಜೇಶ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಸುರತ್ಕಲ್ ಅರಣ್ಯವಲಯದ ಉಪ ಅರಣ್ಯಾಧಿಕಾರಿ ಶ್ರವಣ್ ಕುಮಾರ್, ಸುರತ್ಕಲ್ ಬೀಟ್ ಅರಣ್ಯ ಅಧಿಕಾರಿ ಗಂಗಾಧರ್ , ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ 0ದ್ರ ಕುಂದೇಶ್ವರ,ಉಪಾಧ್ಯಕ್ಷ ಭಾಸ್ಕರ ರೈಕಟ್ಟಾ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ,ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ,ಕೋಡಿಕೆರೆ ಎಸ್ ಟಿ ಪಿ ಗುತ್ತಿಗೆದಾರ ಶಾಂತರಾಜು ಮೊದಲಾದವರು ಉಪಸ್ಥಿತರಿದ್ದರು.

More from the blog

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...