Monday, June 30, 2025

*ಬಂಟ್ವಾಳದಲ್ಲಿ ತುಲು ಲಿಪಿ ನಾಮಫಲಕ ಅನಾವರಣ* 

ಬಂಟ್ವಾಳ: ತುಲುನಾಡ ಯುವಸೇನೆ, ಬಂಟ್ವಾಳ ನೇತೃತ್ವದಲ್ಲಿ ವಿಶ್ವ ತುಲು ಲಿಪಿ ದಿನವಾದ ಅಕ್ಟೋಬರ್ 10 ರಂದು ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ಯುವಜನ ವ್ಯಾಯಾಮ ಶಾಲೆಯ ನಾಮಫಲಕವನ್ನು ತುಲು ಲಿಪಿಯಲ್ಲಿ ಹಾಕಲಾಯಿತು.

ತುಲು ಲಿಪಿ ಶಿಕ್ಷಕರು ಹಾಗೂ ಜೈ ತುಲುನಾಡ್ (ರಿ.) ಸಂಘಟನೆಯ ಉಪ ಸಂಘಟನಾ ಕಾರ್ಯದರ್ಶಿಯಾದ ಜಗದೀಶ ಗೌಡ ಕಲ್ಕಳ ಇವರು ತುಲು ಲಿಪಿ ನಾಮಫಲಕವನ್ನು ಅನಾವರಣಗೊಳಿಸಿದರು. ಹಾಗೆಯೇ ತುಲು ಲಿಪಿ ದಿನದ ವಿಶೇಷತೆ ಹಾಗೂ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟುಹಬ್ಬವನ್ನು ತುಲು ಲಿಪಿ ದಿನವಾಗಿ ಆಚರಿಸುವುದರ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತುಲು ಲಿಪಿಯಲ್ಲಿ ನಾಮಫಲಕವನ್ನು ಬರೆದ ಜಯ ಆರ್ಟ್ಸ್‌ನ ಜಯರಾಮ, ಯುವಜನ ವ್ಯಾಯಾಮ ಶಾಲೆ ಭಂಡಾರಿಬೆಟ್ಟು ಇದರ ಅಧ್ಯಕ್ಷರಾದ ಹೆನ್ರಿ ಪಿರೇರಾ ಉಪಸ್ಥಿತಿ ಇದ್ದರು. ತುಲುನಾಡ ಯುವಸೇನೆ ಬಂಟ್ವಾಳ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ತುಲು ಲಿಪಿ ಶಿಕ್ಷಕರಾದ ಪೃಥ್ವಿ ತುಲುವೆ ಕಾರ್ಯಕ್ರಮವನ್ನು ನಿರೂಪಿಸಿದರು. ನಾಮಫಲಕ ಅನಾವರಣದ ನಂತರ ಜೈ ತುಲುನಾಡ್ (ರಿ.), ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ನಡೆದ ಬಲೆ ತುಲು ಲಿಪಿ ಕಲ್ಪುಗ ಕಾರ್ಯಾಗಾರದ ತುಲು ಲಿಪಿ ಪರೀಕ್ಷೆ ನಡೆಯಿತು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ, ಪೂರ್ಣಿಮಾ ಬಂಟ್ವಾಳ ಮತ್ತು ಪೃಥ್ವಿ ತುಲುವೆ ಪರೀಕ್ಷೆಯನ್ನು ನಡೆಸಿಕೊಟ್ಟರು.

More from the blog

ಬೋಳಂತೂರು : ಮನೆ ದುರಸ್ತಿ ಶ್ರಮದಾನ ಕಾರ್ಯಕ್ರಮ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ವಿಟ್ಲ ಇದರ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಭೀಮ್ ಸಂಜೀವಿನಿ ಬೋಳಂತೂರು ಇದರ ಜಂಟಿ...

ಮಾಣಿಲ – ಸಾಮೂಹಿಕ ಲಕ್ಷ್ಮೀ ಪೂಜೆ : ಧಾರ್ಮಿಕ ಸಭೆ..

ವಿಟ್ಲ: ಕೋಪ, ಅಹಂಕಾರ, ಗರ್ವಗಳೆಲ್ಲವೂ ಬದುಕಿಗೆ ಎಂದೂ ಪ್ರಯೋಜನಕ್ಕೆ ಬಾರವು. ಉದ್ರೇಕ ರೋಷ, ದ್ವೇಷಗಳಿಂದ ಏನೂ ಸಾಧಿಸಲಾಗದು. ಭ್ರಮೆಯಿಂದ ಹೊರಬೇಕಾದರೆ ಗುರುಶಕ್ತಿಯನ್ನು ಅರಿತುಕೊಳ್ಳುವ ಜ್ಞಾನವನ್ನು ಹೊಂದಬೇಕು. ಎಲ್ಲರನ್ನೂ ಎಲ್ಲವನ್ನೂ ಪ್ರೀತಿಸುತ್ತಾ ಸಾಗೋಣ ಎಂದು...

ಫರಂಗಿಪೇಟೆ: ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ೭೫ರ ಮಂಗಳೂರು- ಬಿ.ಸಿ.ರೋಡು ಹೆದ್ದಾರಿಯನ್ನು ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವು ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಅಡ್ಯಾರ್ ನಿಂದ ಫರಂಗಿಪೇಟೆ ಮೂಲಕ ಕಡೆಗೋಳಿವರೆಗೆ...

Strike : ಜು. 9ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

ಬಂಟ್ವಾಳ : ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ...