ಬಂಟ್ವಾಳ: ಕೊರೋನಾ ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಗಳ ಆಸ್ತಿ ತೆರಿಗೆಯ ಮೇಲೆ ಶೇ. 5ರಷ್ಟು ರಿಯಾಯಿತಿ ಸೌಲಭ್ಯವನ್ನು ಜುಲೈ 2020 ರ ವರೆಗೆ ಮತ್ತು ವಿಳಂಬಕ್ಕೆ ದಂಡ ವಿಧಿಸುವ ಅವಧಿಯನ್ನು 4 ತಿಂಗಳು ಮುಂದೂಡುವ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಮಾಡಿದ್ದಾರೆ.


