Sunday, June 29, 2025

ದ.ಕ -ಉಡುಪಿ ಓಡಾಟಕ್ಕೆ ಉದ್ಯೋಗಸ್ಥರಿಗೆ ಇನ್ಮುಂದೆ ಪಾಸ್ ಬೇಕಿಲ್ಲ

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮದ್ಯೆ ಜನ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಕೊಂಚ ಸಡಿಲಿಕೆ ಮಾಡಿದ್ದು, ಈ ಎರಡು ಜಿಲ್ಲೆಗಳ ಉದ್ಯೋಗಗಸ್ಥರು ಇನ್ನು ಮುಂದೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಯಾವುದೇ ಅಂತರ್ ಜಿಲ್ಲಾ ಪಾಸ್ ವ್ಯವಸ್ಥೆ ಇಲ್ಲದೆ ಓಡಾಡಬಹುದಾಗಿದೆ ಎಂದು ತಿಳಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಂದೇ ಘಟಕವಾಗಿ ಪರಿಗಣಿಸಲು ಎರಡು ಜಿಲ್ಲಾಡಳಿತಕ್ಕೂ ಸೂಚನೆ ನೀಡಿದೆ. ಸಾರ್ವಜನಿಕರು ತಾವು ಕೆಲಸ ಮಾಡುತ್ತಿರುವ ಕಂಪನಿ, ಸಂಸ್ಥೆಯಿಂದ ನೀಡಲಾಗುವ ಪತ್ರದ ಮೇರೆಗೆ ಮತ್ತು ಕಂಪನಿ ಸಂಸ್ಥೆಯ ಗುರುತಿನ ಚೀಟಿಯೊಂದಿಗೆ ಮಾತ್ರ ಚಲನವಲಗಳಿಗೆ ಅನುಮತಿಸಿದೆ ಎಂದು ರಾಜ್ಯ ಸರ್ಕಾರದ ಆದೇಶದಲ್ಲಿದೆ.

More from the blog

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ..

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ರವಿವಾರ ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ...

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...