Monday, February 2, 2026

ಧರ್ಮಸ್ಥಳದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನ ಆಚರಣೆ

ಉಜಿರೆ: ವೈದ್ಯರು ಮಾನವೀಯತೆಯೊಂದಿಗೆ ಹಾಗೂ ನಗುಮುಖದದಿಂದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಎರಡನೆ ರಾಷ್ಟ್ರೀಯ ಪ್ರಕೃತಿಚಿಕಿತ್ಸಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಆಸ್ಪತ್ರೆ, ಜೈಲು ಮತ್ತು ರುದ್ರಭೂಮಿ ನೋಡಿದಾಗ ನಮಗೆ ಆಧುನಿಕ ಜೀವನದ ಸಮಸ್ಯೆಗಳ ಅರಿವಾಗುತ್ತದೆ. ಆಧುನಿಕಜೀವನ ಶೈಲಿ, ಆಹಾರ ಸೇವನಾ ಕ್ರಮ, ಸದಾಒತ್ತಡದ ಕೆಲಸಗಳು, ಅತಿಯಾದತಂತ್ರಜ್ಞಾನದ ಬಳಕೆ, ವಾಯುಮಾಲಿನ್ಯ ಮೊಬೈಲ್ ಫೋನ್ ಬಳಕೆ ಇತ್ಯಾದಿ ಕಾರಣಗಳಿಂದ ಇಂದು ಎಳೆಯ ಪ್ರಾಯದಲ್ಲೇ ಮನುಷ್ಯರು ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಹೃದಯಾಘಾತ ಮೊದಲಾದ ಭೀಕರ ರೋಗಗಳಿಗೆ ಬಲಿಯಾಗುತ್ತಾರೆ. ಯೋಗ ಮತ್ತು ಪ್ರಕೃತಿಚಿಕಿತ್ಸಾ ವಿಧಾನದಿಂದ ನಾವು ಸಂಪೂರ್ಣ ಆರೋಗ್ಯ ಭಾಗ್ಯವನ್ನು ಹೊಂದಬಹುದು ಎಂದು ಅವರು ಹೇಳಿದರು.
ಕೀಳರಿಮೆ ಹಾಗೂ ಅಹಂ ತ್ಯಜಿಸಿ ಧನಾತ್ಮಕ ಚಿಂತನೆಯೊಂದಿಗೆ ಸದಾ ಒಳ್ಳೆಯ ಕೆಲಸಗಳನ್ನು ಮಾಡಬೇಕು. ವೈದ್ಯರು ರೋಗಿಗಳೊಂದಿಗೆ ನಗುಮೊಗದಿಂದ ಮಾನವೀತೆಯಿಂದ ಮಾತನಾಡಿ, ಶುಶ್ರೂಷೆ ನೀಡಬೇಕು ಎಂದು ಅವರು ಕಿವಿಮಾತು ಹೇಳಿದರು.
ಅಲೋಪತಿ, ಹೋಮಿಯೋಪತಿ, ನೇಚುರೋಪತಿ ಇತ್ಯಾದಿ ವೈದ್ಯಕೀಯ ಪದ್ಧತಿಗಳಿಗಿಂತಲೂ ಮಿಗಿಲಾಗಿ ವೈದ್ಯರಿಗೆ ರೋಗಿಗಳಲ್ಲಿ ಸಿಂಪತಿ ಇರಬೇಕು ಎಂದು ಅವರು ಹೇಳಿದರು.
ಉಪವಾಸ, ವ್ಯಾಯಾಮ, ಯೋಗಾಭ್ಯಾಸ, ನಿತ್ಯ ನಡಿಗೆಇತ್ಯಾದಿ ಕ್ರಿಯೆಗಳಿಂದ ಆರೋಗ್ಯ ಭಾಗ್ಯ ಪಡೆಯಬಹುದು ಎಂದು ಡಾ.ಮಂಜುನಾಥ್‌ ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ನಾವು ಪಂಚೇಂದ್ರಿಯಗಳ ದಾಸರಾಗಬಾರದು. ಒಡೆಯರಾಗಬೇಕು. ಪಂಚೇಂದ್ರೀಯಗಳ ನಿಯಂತ್ರಣದಿಂದ ರೋಗರಹಿತವಾಗಿ ಆರೋಗ್ಯಪೂರ್ಣಜೀವನ ನಡೆಸಬಹುದು. ಧಾರ್ಮಿಕ ಆಚಾರ-ವಿಚಾರಗಳ ಅನುಷ್ಠಾದಿಂದ, ಸದಾಚಾರದೊಂದಿಗೆ ಆದರ್ಶ ಜೀವನ ನಡೆಸಬೇಕು. ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಯೋಗ, ಪ್ರಾರ್ಥನೆ, ಧ್ಯಾನ ಮತ್ತು ಪ್ರಕೃತಿಚಿಕಿತ್ಸಾ ಪದ್ಧತಿಯನ್ನು ಸ್ವಯಂ ಅನುಷ್ಠಾನ ಮಾಡಿ ಆಚಾರ್ಯ ರಾದರುಎಂದು ಹೆಗ್ಗಡೆಯವರು ಹೇಳಿದರು.
ಪ್ರಕೃತಿಚಿಕಿತ್ಸಾ ವೈದ್ಯರು ಕೀಳರಿಮೆ ಹೊಂದದೆ ಅಭಿಮಾನದಿಂದ ಈ ಪದ್ಧತಿಯ ರಾಯಭಾರಿಗಳಾಗಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ಡಾ. ನವೀನ್ ಕೆ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಕೃತಿಚಿಕಿತ್ಸಾ ದಿನಾಚರಣೆಯ ಮಹತ್ವ ವಿವರಿಸಿದರು.
ಆಯುಷ್‌ ಇಲಾಖೆಯ ಜಂಟಿ ನಿರ್ದೇಶಕ ಡಾ.ಶ್ರೀಧರ ಭಟ್, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಎಸ್.ಡಿ.ಎಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಮೂಡಬಿದ್ರೆಯ ಆಳ್ವಾಸ್ ಪ್ರಕೃತಿಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲೆ ಡಾ.ವನಿತಾ ರೈ ಧನ್ಯವಾದವಿತ್ತರು. ಜೋಸ್ನಾ ಮತ್ತು ಅನನ್ಯ ಕಾರ್ಯಕ್ರಮ ನಿರ್ವಹಿಸಿದರು. ಎಂಟು ಕಾಲೇಜುಗಳಿಂದ ಮುನ್ನೂರು ಪ್ರತಿನಿಧಿಗಳು ಭಾಗವಹಿಸಿದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...