ಉಜಿರೆ: ರಜತ ಮಹೋತ್ಸವ ಸಂಭ್ರಮದಲ್ಲಿರುವ ಬೆಳ್ತಂಗಡಿ ಜೈನ್ ಮಿಲನ್ ಆಶ್ರಯದಲ್ಲಿ ಡಿ.15 ರಂದು ಭಾನುವಾರ ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆ ಆಯೋಜಿಸಲಾಗಿದೆ.
ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸುವರು.ಭಾರತೀಯ ಜೈನ್ ಮಿಲನ್ ಮಹಿಳಾ ವಿಭಾಗದ ಅಧ್ಯಕ್ಷರಾದ ಅನಿತಾ ಸುರೇಂದ್ರಕುಮಾರ್ ಶುಭಾಶಂಸನೆ ಮಾಡುವರು. ಮಂಗಳೂರಿನ ಉದ್ಯಮಿ ಪುಷ್ಪರಾಜ್ ಜೈನ್, ಉಡುಪಿಯ ಪ್ರಸನ್ನಕುಮಾರ್, ಬಂಟ್ವಾಳದ ಸುದರ್ಶನ್‌ಜೈನ್ ಮತ್ತು ಬೆಳ್ತಂಗಡಿ ಜೈನ್ ಮಿಲನ್ ಸ್ಥಾಪಕಾಧ್ಯಕ್ಷ ಪಡಂಗಡಿ ಭೋಜರಾಜ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಸಂಘಟಕರು ತಿಳಿಸಿದ್ದಾರೆ.

