Wednesday, June 25, 2025

ಮಂಗಳೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ: ಧರ್ಮಸ್ಥಳದಲ್ಲಿ ಲಾಂಛನ ಬಿಡುಗಡೆ

ಉಜಿರೆ: ಪತ್ರಿಕೆಗಳಲ್ಲಿ ವಾಸ್ತವಿಕ ವಿಚಾರ ಮತ್ತುಆಸಕ್ತಿಯ ಲೇಖನಗಳು, ವರದಿಗಳು ಇದ್ದಾಗಓದುಗರ ಸಂಖ್ಯೆ ಹೆಚ್ಚಾಗುತ್ತದೆಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಶನಿವಾರ ಧರ್ಮಸ್ಥಳದಲ್ಲಿ ವಸಂತ ಮಹಲ್‌ನಲ್ಲಿ, ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಪತ್ರಕರ್ತರಿಗೆ ಒತ್ತಡ ಇರುವುದು ಸಹಜ.ಆದರೆ ಓದುಗರಿಗೆ ನೀಡುವ ವರದಿ, ಮಾಹಿತಿ ಉಪಯುಕ್ತ ಹಾಗೂ ಪರಿಣಾಮಕಾರಿಯಾಗಿರಬೇಕು ಎಂದು ಸಲಹೆ ನೀಡಿದರು.


ಇಂದು ಸಾವಿರಾರು ಪತ್ರಕರ್ತರು ತೆರೆಮರೆಯಲ್ಲಿ ಕೆಲಸ ಮಾಡುತ್ತಾರೆ. ಅವರನ್ನು ಸಮಾಜಕ್ಕೆ ಪರಿಚಯಿಸಬೇಕು ಹಾಗೂ ಅವರಿಗೆ ಸಿಗಬೇಕಾದ ವೇತನ, ವಿಮಾ ಭದ್ರತೆ, ವೃದ್ಧಾಪ್ಯ ವೇತನಇತ್ಯಾದಿ ಸೌಲಭ್ಯಗಳು ದೊರಕಲು ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಸಹಕಾರಿಯಾಗಲಿ ಎಂದು ಹೆಗ್ಗಡೆಯವರು ಹಾರೈಸಿದರು.


ಶಾಸಕ ಹರೀಶ್ ಪೂಂಜ ಮಾತನಾಡಿ, ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ತಾನು ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಾಧ್ಯಮಗಳು ಜನರಲ್ಲಿ ಸಂಶಯ ಬರುವಂತೆ ವರ್ತಿಸಬಾರದು ಎಂದು ಹೇಳಿದರು.
ದ,ಕ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ವಾಸ್ತವ್ಯದ ಮಹತ್ವ ವಿವರಿಸಿದರು.


ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಮತ್ತು ರಾಜ್ಯ ಪತ್ರಕರ್ತರ ಸಂಘದ ಕಾರ್ಯದರ್ಶಿ ಲೋಕೇಶ್, ಡಿ.ಪಿ. ಹರೀಶ್‌ರೈ, ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

More from the blog

ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...