Saturday, January 31, 2026

ಅಂತರ್ಜಲ ಜನಜಾಗೃತಿ ಶಿಬಿರ: ನೀರನ್ನು ಹಿತ-ಮಿತವಾಗಿ ಬಳಸಿ, ಪೋಲು ಮಾಡಬೇಡಿ

ಉಜಿರೆ: ಶುದ್ಧವಾದ ಗಾಳಿ ಮತ್ತು ನೀರು, ದೇವರು ನಮಗೆ ಕೊಟ್ಟ ಸೌಭಾಗ್ಯವಾಗಿದೆ. ನೀರನ್ನು ಹಿತ-ಮಿತವಾಗಿ ಬಳಸಿ, ಪೋಲು ಮಾಡಬೇಡಿ ಎಂದು ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಹೇಳಿದರು.
ಅವರು ಮಂಗಳವಾರ ಧರ್ಮಸ್ಥಳದಲ್ಲಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ದ.ಕ. ಜಿಲ್ಲಾ ಅಂತರ್ಜಲ ಕಛೇರಿಯ ಆಶ್ರಯದಲ್ಲಿ ಆಯೋಜಿಸಿದ ಸಾರ್ವಜನಿಕ ಅಂತರ್ಜಲ ಜನಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕೊಳವೆ ಬಾವಿಗಳಿಂದಾಗಿ ಭೂಮಿಯ ಅಂತರ್ಜಲ ಮಟ್ಟ ಕುಸಿತವಾಗುತ್ತಿದೆ. ಇಂಗು ಗುಂಡಿಗಳ ಮೂಲಕ ನೀರನ್ನು ಭೂಮಿಗೆ ಇಂಗಿಸುವ ಮೂಲಕ ನೀರಿನ ಸದ್ಬಳಕೆ ಮಾಡಬೇಕು. ಹನಿ ನೀರಾವರಿಯಿಂದಲೂ ಕಡಿಮೆ ನೀರು ಬಳಸಿ ಹೆಚ್ಚು ಕೃಷಿ ಮಾಡಬಹುದು.
ಕಳೆದ 15 ವರ್ಷಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿಲ್ಲ. ಆದರೆ ಮಳೆ ಬರುವ ರೀತಿಯಲ್ಲಿ ವ್ಯತ್ಯಾಸವಾಗಿದೆ ಎಂದು ಹೇಳಿದರು.
ಬೆಳ್ತಂಗಡಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ದಿವ್ಯಜ್ಯೋತಿ, ಎ.ಪಿ.ಎಂ.ಸಿ. ಅಧ್ಯಕ್ಷ ಕೇಶವ ಗೌಡ ತಾಲೂಕು ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ, ಯೋಜನಾಧಿಕಾರಿ ಜಯಕರ ಶೆಟ್ಟಿ, ಉಡುಪಿಯ ಹಿರಿಯ ಭೂ ವಿಜ್ಞಾನಿ ಡಾ.ದಿನಕರ ಶೆಟ್ಟಿ ಉಪಸ್ಥಿತರಿದ್ದರು.
ಹಿರಿಯ ಭೂ ವಿಜ್ಞಾನಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಕೊರಗಪ್ಪ ನಾಯ್ಕ್ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿದರು.
ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಂತಿ ಅಧ್ಯಕ್ಷತೆ ವಹಿಸಿದರು. ರತ್ನಶ್ರೀ, ಜೋಸೆಫ್‌ಜಿ.ಎಮ್. ರೆಬೆಲ್ಲೊ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.
ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ. ಸ್ವಾಗತಿಸಿ, ಪ್ರಫುಲ್ಲಾ ವಂದಿಸಿದರು.ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...