Wednesday, February 12, 2025

ಮಾಧ್ಯಮ ಕೇಂದ್ರ ಉದ್ಘಾಟನೆ

ಉಜಿರೆ: ಧರ್ಮಸ್ಥಳದಲ್ಲಿ ನಡೆಯುವ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಶುಕ್ರವಾರ ಮಾಧ್ಯಮಕೇಂದ್ರವನ್ನು ಪ್ರಾಥಮಿಕ ಶಾಲೆಯಲ್ಲಿ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಉದ್ಘಾಟಿಸಿ ಶುಭ ಹಾರೈಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಮಸ್ತಕಾಭಿಷೇಕದ ಬಗ್ಯೆ ಮಾಧ್ಯಮಗಳು ನೀಡಿದ ವ್ಯಾಪಕ ಪ್ರಚಾರ ಅದ್ಭುತವಾಗಿದೆ ಎಂದು ಸಂತೋಷ ಮತ್ತು ಅಚ್ಚರಿ ವ್ಯಕ್ತಪಡಿಸಿದರು. ಕಾರ್ಕಳದಲ್ಲಿ ಬಾಹುಬಲಿ ಮೂರ್ತಿಕೆತ್ತನೆ, ರಸ್ತೆ ಮೂಲಕ ಧರ್ಮಸ್ಥಳಕ್ಕೆ ಸಾಗಾಣಿಕೆ, ಪ್ರತಿಷ್ಠಾಪನೆ ಮತ್ತು ಮಹಾಮಸ್ತಕಾಭಿಷೇಕದ ಬಗ್ಯೆ ಸಮಗ್ರ ವರದಿ ಹಾಗೂ ಮಾಹಿತಿ ಪ್ರಕಟಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ವೈ-ಫೈಯೊಂದಿಗೆ ಸುಸಜ್ಜಿತ ಮಾಧ್ಯಮಕೇಂದ್ರ ರೂಪಿಸಿದ್ದು ಮಾಧ್ಯಮದವರು ಇದರ ಸದುಪಯೋಗ ಪಡೆಯಬೇಕೆಂದು ಹೆಗ್ಗಡೆಯವರು ಸಲಹೆ ನೀಡಿದರು.
ಡಿ. ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ, ಡಿ. ಶ್ರೇಯಸ್‌ಕುಮಾರ್, ನಿಶ್ಚಲ್‌ಕುಮಾರ್, ಪೂರಣ್ ವರ್ಮ, ಅಭಿಜಿತ್ ಮೂಡಬಿದ್ರೆ, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಯನ್. ಪೂವಣಿ, ಎಸ್.ಡಿ.ಎಂ.ಕಾಲೇಜಿನ ಪ್ರೊ.ಭಾಸ್ಕರ ಹೆಗ್ಡೆ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರೊ.ಭಾಸ್ಕರ ಹೆಗ್ಡೆ ಸ್ವಾಗತಿಸಿದರು. ಅಭಿಜತ್ ಮೂಡಬಿದ್ರೆ ಧನ್ಯವಾದವಿತ್ತರು.

ಇಂದು ಸಿ.ಎಂ. ಧರ್ಮಸ್ಥಳಕ್ಕೆ
ಉಜಿರೆ: ಮುಖ್ಯಮಂತ್ರಿಎಚ್.ಡಿ. ಕುಮಾರಸ್ವಾಮಿ ಶನಿವಾರ ಧರ್ಮಸ್ಥಳಕ್ಕೆ ಬಂದು ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭ ಆಯೋಜಿಸಿದ ಸಮಾರಂಭದಲ್ಲಿ ಭಾಗವಹಿಸುವರು.
ಶನಿವಾರ ಬೆಳಿಗ್ಗೆ 8 ಗಂಟೆಗೆ ಶೃಂಗೇರಿಯಿಂದ ಹೊರಟುರಸ್ತೆ ಮೂಲಕ ಧರ್ಮಸ್ಥಳಕ್ಕೆ ಹನ್ನೊಂದು ಗಂಟೆಗೆ ತಲುಪುವರು.
ಧರ್ಮಸ್ಥಳದಲ್ಲಿ ಚತುಷ್ಪಥರಸ್ತೆಯ ಪ್ರಥಮ ಹಂತದ ಉದ್ಘಾಟನೆ ಮಾಡಿ, ಸರ್ಕಾರದ ಸಹಯೋಗದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಆಶ್ರಯದಲ್ಲಿ ಯೋಜಿಸಿದ ಕೆರೆ ಸಂಜೀವಿನಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಸಮಾರಂಭದ ಬಳಿಕ ಎರಡುಗಂಟೆಗೆ ಧರ್ಮಸ್ಥಳದಿಂದ ಹೊರಟು ಬಜ್ಪೆಯಿಂದ ವಿಶೇಷ ವಿಮಾನ ಮೂಲಕ ಸಂಜೆ 4 ಗಂಟೆಗೆ ಹುಬ್ಬಳ್ಳಿಗೆ ತಲುಪುವರು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಧರ್ಮಸ್ಥಳದಲ್ಲಿ ಜನಕಲ್ಯಾಣ ಕಾರ್ಯಕ್ರಮಗಳ ಉದ್ಘಾಟನೆ
ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಅಂಗವಾಗಿ ಆಯೋಜಿಸಿದ ಜನಮಂಗಲ ಕಾರ್ಯಕ್ರಮದ ಅಂಗವಾಗಿ ಯೋಜಿಸಿದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವಎಚ್.ಡಿ. ರೇವಣ್ಣ ಶನಿವಾರ ಬೆಳಿಗ್ಗೆ ಹನ್ನೊಂದುಗಂಟೆಗೆ ಚಾಲನೆ ನೀಡುವರು.
ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜುಕೆರೆ ಸಂಜೀವಿನಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು.
ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸುವರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವಯು.ಟಿ.ಖಾದರ್, ಸಂಸದ ನಳಿನ್ ಕುಮಾರ್‌ಕಟೀಲ್, ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯರಾದ ಹರೀಶ್‌ಕುಮಾರ್ ಮತ್ತು ಭೋಜೇಗೌಡ ಮತ್ತು ಮೂಡಬಿದ್ರೆಯ ಡಾ.ಎಂ.ಮೋಹನ ಆಳ್ವ ಶುಭಾಶಂಸನೆ ಮಾಡುವರು.
ಸಚಿವೆ ಜಯಮಾಲಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.
ಚಲನಚಿತ್ರ ನಟರಮೇಶ್‌ ಅರವಿಂದ ಲೇಸರ್ ಶೋ ಉದ್ಘಾಟಿಸುವರು.
ಬಾಹುಬಲಿ ಮೂರ್ತಿಯನ್ನು ರೂಪಿಸಿದ ಶಿಲ್ಪಿ ರೆಂಜಾಳ ಗೋಪಾಲಕೃಷ್ಣ ಶೆಣೈಅವರ ಪ್ರಸಕ್ತತಲೆಮಾರಿನ ಪ್ರತಿನಿಧಿಗಳಿಗೆ ಹೆಗ್ಗಡೆಯವರು ಸನ್ಮಾನ ಮಾಡುವರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...