Friday, January 30, 2026

ಉಳ್ಳಾಲ ನಗರ ಸಭಾ ಆಡಳಿತ ಕಾಂಗ್ರೆಸ್ ತೆಕ್ಕೆಗೆ: ಅಧ್ಯಕ್ಷರಾಗಿ ಚಿತ್ರಕಲಾ ಚಂದ್ರಕಾಂತ್, ಉಪಾಧ್ಯಕ್ಷರಾಗಿ ಆಯುಬ್ ಮಂಚಿಲ ಆಯ್ಕೆ

ಮಂಗಳೂರು: ಇತ್ತೀಚಿಗೆ ನಡೆದ ಉಳ್ಳಾಲ ನಗರ ಸಭಾ ಚುನಾವಣೆಯಲ್ಲಿ ಬಿ.ಜೆ.ಪಿ., ಎಸ್.ಡಿ.ಪಿ.ಐ. ಹಾಗೂ ಕಾಂಗ್ರೆಸ್ ಪಕ್ಷಗಳ ತ್ರಿಕೋನ ಸ್ಪರ್ಧೆ ಉಂಟಾಗಿತ್ತು. ಈಗ ಅದರ ಫಲಿತಾಂಶ ಪ್ರಕಟಗೊಂಡಿದ್ದು, ಉಳ್ಳಾಲ ನಗರಸಭಾ ಆಡಳಿತ ಕಾಂಗ್ರೆಸ್ ಗೆ ಸಿಕ್ಕಿದೆ. ಅಧ್ಯಕ್ಷರಾಗಿ ಚಿತ್ರಕಲಾ ಚಂದ್ರಕಾಂತ್, ಉಪಾಧ್ಯಕ್ಷರಾಗಿ ಆಯುಬ್ ಮಂಚಿಲ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಇಬ್ಬರಿಗೂ ಶಾಸಕ ಯು.ಟಿ. ಖಾದರ್‍ ಅಭಿನಂದನೆ ಸಲ್ಲಿಸಿದ್ದಾರೆ.

ನ್ಯಾಯಾಲಯ ಹೊರಡಿಸಿದ್ದ ತಡೆಯಾಜ್ಞೆ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಖಾಲಿ ಉಳಿದಿದ್ದ ಉಳ್ಳಾಲ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ನವೆಂಬರ್ 2 ರ ಸೋಮವಾರ ಮಧ್ಯಾಹ್ನ 1.30 ಗಂಟೆಗೆ ಚುನಾವಣೆ ನಡೆಯಿತು. ಕಾಂಗ್ರೆಸ್‌ನ ಚಿತ್ರ ಚಂದ್ರಕಾಂತ್ ಮತ್ತು ಅಯೂಬ್ ಮಂಚಿಲ, ಎಸ್‌ಡಿಪಿಐನಿಂದ ಝರೀನಾ ಬಾನು ಹಾಗೂ ಬಿಜೆಪಿಯಿಂದ ರೇಷ್ಮಾ ಜಗದೀಶ್ ಅಧ್ಯಕ್ಷ ಸ್ಥಾನಕ್ಕೆ, ಜೆಡಿ (ಎಸ್) ನ ರಮೀಝ್‌ ಕೋಡಿ, ಜಬ್ಬರ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಇಂದು ಚುನಾವಣೆ ನಡೆದಿದ್ದು, ಎರಡು ಸ್ಥಾನಗಳು ಕೂಡಾ ಕಾಂಗ್ರೆಸ್‌ ಗೆ ಸೇರಿದೆ.

 

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...