Monday, February 2, 2026

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರ್ ಶಾಖೆಯ ಉದ್ಘಾಟನೆ

ದೇಶದ ಸಾರ್ವಜನಿಕ ಕ್ಷೇತ್ರದ 5ನೇ ಅತಿ ದೊಡ್ಡ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಮಡಂತ್ಯಾರು ತಾಖೆಯ ನವೀಕೃತ ಶಾಖೆಯ ಉದ್ಘಾಟನಾ ಸಮಾರಂಭ ನಡೆಯಿತು.

ಗ್ರಾಹಕರಿಗೆ ಇನ್ನೂ ಉತ್ತಮ ಸೇವೆಗಳನ್ನು ನೀಡುವ ನಿಟ್ಟಿನಲ್ಲಿ ಶಾಖೆಯನ್ನು ನವೀಕರಿಸಲಾಗಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವು ತನ್ನ ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸುವುದಕ್ಕೆ ಹೆಸರುವಾಸಿಯಾಗಿದೆ ಹಾಗೂ ತನ್ನ ಗ್ರಾಹಕರಿಗಾಗಿ ವಿವಿಧ ಡಿಜಿಟಲ್ ಉತ್ಪನ್ನಗಳು, ಠೇವಣಿದಾರರಿಗೆ, ಹಿರಿಯ ನಾಗರಿಕರಿಗೆ ಅತ್ಯಾಕರ್ಷಕ ಬಡ್ಡಿ ದರ ಹಾಗೂ ಸ್ಪರ್ಧಾತ್ಮಕ ಬಡ್ಡಿ ದರದಲ್ಲಿ ವಿವಿಧ ಸಾಲಗಳನ್ನು ನೀಡುತ್ತಿದೆ. ಜನತೆಗೆ ಹಣಕಾಸಿನ ಸಾಕ್ಷರತೆ ಮತ್ತು ಬ್ಯಾಂಕಿಂಗ್ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯವು ಸದಾ ಬದ್ಧವಾಗಿರುತ್ತದೆ.

ವಲಯ ಮುಖ್ಯಸ್ಥರಾದ ರೇಣು ನಾಯರ್ ನವೀಕೃತ ಶಾಖೆಯನ್ನು ಉದ್ಘಾಟಿಸಿ ಮಾತನಾಡುತ್ತಾ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಮಡಂತ್ಯಾರ್ ಗೆ ಅಭಿವೃದ್ಧಿಗೆ ಪೂರಕವಾಗಿ ಸಕಲ ಸವಲತ್ತು ಇರುವ ನವೀಕೃತ ತಾಖೆಯನ್ನು ನೀಡುವ ಗುರಿಯನ್ನು ಇಂದು ತಲುಪಿದ್ದೇವೆ, ಬ್ಯಾಂಕ್ ಗಳು ವಿಲೀನಗೊಂಡ ನಂತರ ಜನರಿಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸುತ್ತಿದೆ ಹಾಗೂ ಇದರ ಲಾಭ ಜನಸಾಮಾನ್ಯರಿಗೆ ದೊರಕುತ್ತಿದೆ. ಪ್ರಾದೇಶಿಕ ಕಚೇರಿಯ ಮುಖ್ಯಸ್ಥರಾದ ಮಹೇಶ ಜೆ ನೆರಿದಿದ್ದ ಗಣ್ಯರನ್ನು ಮತ್ತು ಗ್ರಾಹಕರನ್ನು ಸ್ವಾಗತಿಸಿ ಮಡಂತ್ಯಾರಿನ ಜನತೆಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಈ ಶಾಖೆಯು ಸ್ಥಳೀಯರ ಬ್ಯಾಂಕಿಂಗ್ ಅಗತ್ಯಗಳನ್ನು ಪೂರೈಸುವಲ್ಲಿ ಬಹು ಮಹತ್ವದ ಪಾತ್ರವಹಿಸಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಪಂಚಾಯತಿನ ಅಧ್ಯಕ್ಷರಾದ ರೂಪಾ ನವೀನ್ ಮತನಾಡುತ್ತಾ ಗ್ರಾಮ ಪಂಚಾಯತ್ ಈ ಬ್ಯಾಂಕಿನಿಂದ ಹಲವಾರು ಪ್ರಯೋಜನ ಪಡೆದಿದೆ ಹಾಗೂ ನಮ್ಮ ಎಲ್ಲಾ ಕೆಲಸ ಕಾರ್ಯಗಳು ಸಾಂಗವಾಗಿ ನಡೆಯುವಲ್ಲಿ ಶಾಖೆಯ ಸಿಬಂದಿಗಳು ಸಹಕರಿಸುತ್ತಿದ್ದಾರೆ ಎಂದರು.

ಇನ್ನೋರ್ವ ಮುಖ್ಯ ಇತಿಥಿಗಳಾದ ವಿಠಲ ಶೆಟ್ಟಿ ಮಾತನಾಡಿ ಬ್ಯಾಂಕಿನ ಹಲವಾರು ಯೋಜನೆಗಳು ಜನರಿಗೆ ತಲುಪುವುದರಿಂದ ಜನರಿಗೆ ತುಂಬಾ ಪ್ರಯೋಜನವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಯಂತ್ ಶೆಟ್ಟಿ ಹಾಗೂ ಅಶೋಕ್ ಗುಂಡ್ಕಲಿಕೆ ಮಾತನಾಡುತ್ತಾ ಶಾಖೆಯ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಕಾಖಾ ಪ್ರಬಂಧಕರಾದ ಅಶೋಕ್ ಕೋಟ್ಯಾನ್ ಮಾಡಿದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...