Tuesday, January 27, 2026

ಹಸುಗೂಸು ಸಹಿತ ಮಕ್ಕಳಿಬ್ಬರನ್ನು ಬಿಟ್ಟು ದಂಪತಿ ನಾಪತ್ತೆ : ಪತ್ತೆಗೆ ಮನವಿ

ಉಪ್ಪಿನಂಗಡಿ: ಮನೆಯೊಂದರಲ್ಲಿ ತಮ್ಮ ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿರುವ ಹೆತ್ತವರ ಪತ್ತೆಗಾಗಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದ ಘಟನೆ ಕರಾಯದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕಾಯಕದೊಂದಿಗೆ ಆಗಾಗ ಕಾಣಿಸಿಕೊಂಡು ಪರಿಸರದ ನಿವಾಸಿಗರ ವಿಶ್ವಾಸಗಳಿಸಿದ್ದರು. ಮದ್ಯ ವ್ಯಸನಿಗಳಾದ ಇವರು ಅಲ್ಲಲ್ಲಿ ಮಲಗಿಕೊಂಡು ಅವ್ಯವಸ್ಥಿತ ಜೀವನ ನಡೆಸುತ್ತಿದ್ದರು. ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ ಮಗನಿದ್ದು, ಒಂದು ತಿಂಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು.

ಜೂ. 2ರಂದು ಈ ಎರಡು ಮಕ್ಕಳನ್ನು ಕರಾಯ ಗ್ರಾಮದ ಮನೆಯೊಂದರಲ್ಲಿ ಬಿಟ್ಟು ನಾವು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಬರುತ್ತೇವೆ ಎಂದು ಹೇಳಿ ಈ ದಂಪತಿ ತೆರಳಿದ್ದಾರೆ. ಮಾನವೀಯತೆ ಮೆರೆದ‌ ಮನೆಯೊಡತಿ ಫಾತಿಮಾ ಅವರು ಇದಕ್ಕೆ ಒಪ್ಪಿಕೊಂಡಿದ್ದರು. ಆದರೆ ಆ ಬಳಿಕ ಈ ದಂಪತಿಯ ಪತ್ತೆಯಿರಲಿಲ್ಲ. ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳ ಲಾಲನೆ ಪಾಲನೆ ಮಾಡಿದ ಫಾತಿಮಾ ಅವರು 2 ದಿನ ಕಳೆದರೂ ಹೆತ್ತವರು ಕಾಣಿಸಿಕೊಳ್ಳದೇ ಹೋದಾಗ ಕಳವಳಗೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಮಕ್ಕಳನ್ನು ರವಿವಾರ ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದರು.

ಮಕ್ಕಳನ್ನು ಬಿಟ್ಟು ಹೋಗಿ ಮೂರು ದಿನವಾದರೂ ಹೆತ್ತವರ ಪತ್ತೆ ಇಲ್ಲದಿರುವುದನ್ನು ಗಮನಿಸಿದ ಫಾತಿಮಾ ಸೋಮವಾರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿ, ದಂಪತಿಯನ್ನು ಪತ್ತೆ ಹಚ್ಚಲು ವಿನಂತಿಸಿದ್ದಾರೆ. ದಂಪತಿಯ ಪೈಕಿ ಗಂಡನ ಹೆಸರು ತಿಳಿದಿಲ್ಲವೆಂದೂ, ಪತ್ನಿಯ ಹೆಸರು ಆಕೆಯ ಮಗ ತಿಳಿಸಿದ ರೀತಿಯಲ್ಲಿ ಲೀಲಾ ಎಂಬುದಾಗಿದೆ ಎಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

More from the blog

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...