ಉಪ್ಪಿನಂಗಡಿ: ನಿರ್ಮಾಣ ಹಂತದ ಮನೆಯ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕರ್ವೇಲು ಎಂಬಲ್ಲಿ ನಡೆದಿದೆ.

ಕರ್ವೇಲು ನಿವಾಸಿ ಮುಹಮ್ಮದ್ ಮುಸ್ತಫ ಮೃತಪಟ್ಟವರು.
ಇವರು ಕರ್ವೇಲ್ ನಲ್ಲಿ ಮನೆಯೊಂದನ್ನು ಕಟ್ಟಿಸುತ್ತಿದ್ದು, ಕಾರ್ಮಿಕರೊಂದಿಗೆ ಸೇರಿಕೊಂಡು ಸ್ವತಃ ಮನೆಯ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದರು. ಇಂದು ಬೆಳಗ್ಗೆ ಮನೆಯ ಮೇಲೇರಿ ಸಿಮೆಂಟ್ ಕಾಮಗಾರಿಗೆ ನೀರು ಹಾಕುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗಡೆ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ಗರ್ಭಿಣಿ ಪತ್ನಿ, ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.