ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಬಳಿಯ ಪೆರಿಯಡ್ಕ ಎಂಬಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ.
ಅವರು ತಾಯಿಯೊಂದಿಗೆ ವಾಸವಾಗಿದ್ದು, ಮಡಂತ್ಯಾರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿಯಲ್ಲಿ ಕಲಿಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಖನ್ನತೆಗೊಳಗಾದವನಂತೆ ವರ್ತಿಸುತ್ತಿದ್ದ ಅವರು ಒಂದೂವರೆ ತಿಂಗಳಿನಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿಯೇ ಇದ್ದರು. ಫೆ. 14ರ ರಾತ್ರಿ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ಮರಳಿ ಬಂದಾಗ ಈತ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.