Wednesday, January 28, 2026

ಕುಕ್ಕಾಜೆ- ಪತ್ತುಮುಡಿ- ಚಟ್ಟೆಕಲ್-ಇರಾ ರಸ್ತೆ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ ಸಮಾರಂಭ

ಬಂಟ್ವಾಳ: ಮಂಚಿ-ಇರಾ ಹಾಗೂ ಸಜಿಪ ನಡು ಗ್ರಾಮಗಳನ್ನು ಸಂಪರ್ಕಿಸುವ ಕುಕ್ಕಾಜೆ-ಪತ್ತುಮುಡಿ-ಚಟ್ಟೆಕಲ್-ಇರಾ ಮುಖ್ಯ ರಸ್ತೆಯನ್ನು ಅಭಿವೃದ್ಧಿ ಪಡಿಸುವ 1 ಕೋಟಿ 95 ಲಕ್ಷ ರೂಪಾಯಿ ಅಂದಾಜು ಮೊತ್ತದ ಕಾಮಗಾರಿಗೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಶಿಲಾನ್ಯಾಸ ನೆರವೇರಿಸಿ, ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವದಿಯಲ್ಲಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳು ಮಂಜೂರುಗೊಂಡಿದ್ದು, ಪ್ರಸಕ್ತ ಕಾರ್ಯರೂಪಗೊಳ್ಳುತ್ತಿರುವುದು ಸಂತಸವಾಗುತ್ತಿದೆ ಎಂದರು.

ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಕೊಳ್ನಾಡು ಜಿಲ್ಲಾ ಪಂಚಾಯತ್ ಸದಸ್ಯ ಎಮ್.ಎಸ್. ಮಹಮ್ಮದ್, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ಶಮಿಯುಲ್ಲಾ, ಜಿ.ಎಮ್.ಇಬ್ರಾಹಿಂ, ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಹಮಾನ್ ಕುಕ್ಕಾಜೆ, ಗಣ್ಯರಾದ ಅರುಣ್ ಡಿಸೋಜ ಮುಡಿಪು, ಉಸ್ಮಾನ್ ಕುಕ್ಕಾಜೆ, ಮೊಹಮ್ಮದ್ ಪದವು, ಸಿರಾಜ್ ಪದವು, ಮಹಮ್ಮದ್ ಇರಾ, ಮೊಯಿದಿನ್ ಕುಂಞಿ ದರ್ಭೆ, ಇಬ್ರಾಹಿಂ ಕುಕ್ಕಾಜೆ, ಇನ್ನಿತರರು ಪಾಲ್ಗೊಂಡಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...