Friday, January 30, 2026

ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ಆಯ್ಕೆ : ಇಂದು ನಾಮಪತ್ರ ಸಲ್ಲಿಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು, ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.

ನಿನ್ನೆಯಷ್ಟೇ ಕಾಂಗ್ರೆಸ್ ಹಿರಿಯ ನಾಯಕ ಆರ್‌.ವಿ ದೇಶಪಾಂಡೆ ಅವರು ಹಂಗಾಮಿ ಸ್ಪೀಕರ್ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದರು. ಹಂಗಾಮಿಯಾಗಿ ಅಧಿಕಾರ ಸ್ವೀಕರಿಸೋ ಮುನ್ನ ಈ ಹುದ್ದೆ ಬಹಳ ದೊಡ್ಡದು ನನಗೆ ಬೇಡ. ನನಗೆ ಸಚಿವ ಸ್ಥಾನ ನೀಡಬೇಕೆಂದು ಆರ್‌.ವಿ ದೇಶಪಾಂಡೆ ಅವರು ಒತ್ತಾಯ ಮಾಡಿದ್ದರು ಎನ್ನಲಾಗಿದೆ. ದೇಶಪಾಂಡೆ ಅವರು ಸ್ಪೀಕರ್ ಹುದ್ದೆಗೆ ಒಪ್ಪದ ಹಿನ್ನೆಲೆಯಲ್ಲಿ ಕೈ ನಾಯಕರು UT ಖಾದರ್ ಅವರ ಮನವೊಲಿಸೋ ಪ್ರಯತ್ನ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ನಿನ್ನೆ ಮಧ್ಯರಾತ್ರಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿದರು. ಈ ಸಭೆಯಲ್ಲಿ ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ಅವರನ್ನೇ ಆಯ್ಕೆ ಮಾಡಲಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅಲ್ಪಸಂಖ್ಯಾತರೊಬ್ಬರು ಸ್ಪೀಕರ್ ಸ್ಥಾನ ಅಲಂಕರಿಸಿದ ಕೀರ್ತಿ ಯು.ಟಿ ಖಾದರ್ ಅವರಿಗೆ ಸಿಗಲಿದೆ.

ಇಂದು ಬೆಳಗ್ಗೆ 11 ಗಂಟೆಗೆ ಸಭಾಧ್ಯಕ್ಷ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಸಲಿದ್ದಾರೆ. ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಮೇ ನಾಳೆ ಮೇ.24  ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...