ಬಂಟ್ವಾಳ: ಜಿಲ್ಲಾ ಯುವ ಮೋರ್ಚಾ ವತಿಯಿಂದ ಯು.ಟಿ.ಖಾದರ್ ಅವರ ವಿವಾಧಾತ್ಮಕ ಹೇಳಿಕೆ ವಿರುದ್ಧ ಮಂಗಳೂರಿನ ಪೊಲೀಸ್ ಆಯುಕ್ತ ಹರ್ಷ ಅವರಲ್ಲಿ ದೂರು ನೀಡಿದಾಗ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಶಾಸಕ ಯು.ಟಿ.ಖಾದರ್ ಅವರ ವಿವಾದಾತ್ಮಕ ಹೇಳಿಕೆ ಕೋಮು ಭಾವನೆಗಳನ್ನು ಕೆರಳಿಸಿ ಸಾರ್ವಜನಿಕ ಆಸ್ತಿಪಾಸ್ತಿಗಳ ನಷ್ಟ ಸಂಭವಿಸಲು ಸಾಧ್ಯವಿದೆ. ಹಾಗಾಗಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿದೆ.

ಈ ಸಂದರ್ಭದಲ್ಲಿ ವಕೀಲರ ಪ್ರಕೋಸ್ಟದ ಸುಧಾಕರ್ ಜೋಷಿ, ಪುರಂದರ ಶೆಟ್ಟಿ, ಗಿರೀಶ್, ಮಹೇಶ್ ಜೋಗಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಮೂಡುಶೆಡ್ಡೆ, ಜಿಲ್ಲಾ ಕಾರ್ಯದರ್ಶಿ ಸುದರ್ಶನ್ ಬಜ, ಸುಜಿತ್ ಮಾಡೂರ್, ಕಾರ್ತಿಕ್ ಬಲ್ಲಾಳ್ ಉಪಸ್ಥಿತರಿದ್ದರು

