Wednesday, January 28, 2026

ಮತ್ತೆ ಇಂಧನ ದರ ಏರಿಕೆ: ಪೆಟ್ರೋಲ್, ಡೀಸೆಲ್ ಬೆಲೆ ದಾಖಲೆ ಮಟ್ಟಕ್ಕೆ

ದೆಹಲಿ: ಪೆಟ್ರೋಲ್‌ ಹಾಗೂ ಡಿಸೇಲ್‌ ದರದಲ್ಲಿ ಬುಧವಾರವೂ ಏರಿಕೆ ಕಂಡಿದ್ದು ಪೆಟ್ರೋಲ್ ಹಾಗೂ ಡಿಸೇಲ್‌ ಪ್ರತೀ ಲೀಟರ್‌ ಬೆಲೆ 25 ಪೈಸೆ ಏರಿಕೆಯಾಗಿದೆ.

ಸತತ ಮೂರನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದು ಬೆಲೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಹಾಗೆಯೇ ಮೇ 4ರ ನಂತರ 7ನೇ ಬಾರಿ ಏರಿಕೆ ಮಾಡಿದಂತಾಗಿದೆ.

ಪೆಟ್ರೋಲ್‌ ಹಾಗೂ ಡಿಸೇಲ್‌ ದರದಲ್ಲಿ ಮಂಗಳವಾರವೂ ಏರಿಕೆಯಾಗಿದ್ದು ಪೆಟ್ರೋಲ್ ಪ್ರತೀ ಲೀಟರ್‌ ಬೆಲೆ 25 ರಿಂದ 27 ಪೈಸೆ ಹಾಗೂ ಪ್ರತೀ ಲೀಟರ್‌‌ ಡಿಸೇಲ್‌ ದರ 33 ಪೈಸೆಗೆ ಏರಿಕೆಯಾಗಿತ್ತು.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 92.05ರೂ.ಗೆ ಏರಿಕೆಯಾದರೆ, ಡೀಸೆಲ್ ಬೆಲೆ 82.61ರೂ.ಗೆ ಏರಿದೆ. ಮುಂಬೈನಲ್ಲಿ ಪೆಟ್ರೋಲ್ 98.36 ರೂ. ಹಾಗೂ ಡೀಸೆಲ್ ಬೆಲೆ 89.75 ರೂ.ಗೆ ಏರಿಕೆಯಾಗಿದೆ.

ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 95.11 ರೂ. ಹಾಗೂ ಡಿಸೇಲ್‌ ಬೆಲೆ 95.11 ರೂ ಇದೆ.

More from the blog

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...