Sunday, January 25, 2026

ಮುಂದಿನ ವಾರದಿಂದ ದೇಶದಲ್ಲಿ ಸ್ಪುಟ್ನಿಕ್-ವಿ ಲಸಿಕೆ ಲಭ್ಯ

ದೆಹಲಿ: ಭಾರತದಲ್ಲಿ ಕೊರೋನಾ ಸಂಕಷ್ಟದಲ್ಲಿರುವಾಗ ಈಗಾಗಲೇ ದೇಶೀಯ ಲಸಿಕೆಗಳಾದ ಕೋವಾಕ್ಸಿನ್‌, ಕೋವಿಶೀಲ್ಡ್‌ ಜನರಿಗೆ ಅಲ್ಪ ಆತಂಕ ದೂರು ಮಾಡಿದ್ದೂ, ಇದೀಗ ತುರ್ತು ಬಳಕೆಗೆ ಅನುಮೊದನೆ ಪಡೆದ ಮತ್ತೊಂದು ಲಸಿಕೆ ಸ್ಫುಟ್ನಿಕ್‌ ವಿ ರಷ್ಯಾದಿಂದ ಭಾರತಕ್ಕೆ ಬಂದು ತಲುಪಿದೆ. ಮುಂದಿನ ವಾರದಿಂದ ಭಾರತದ ಮಾರುಕಟ್ಟೆಯಲ್ಲಿ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ ಸಿಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನೀತಿ ಆಯೋಗ ಸದಸ್ಯರಾದ ಡಾ. ವಿ.ಕೆ. ಪಾಲ್ ಅವರು ಈ ಮಾಹಿತಿಯನ್ನ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಸ್ಫುಟ್ನಿಕ್‌ ಲಸಿಕೆ ಭಾರತಕ್ಕೆ ಬಂದಿದ್ದು, ಇದು ಮುಂದಿನ ವಾರ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ ಎಂದು ನಾವು ಭರವಸೆ ಹೊಂದಿದ್ದೇವೆ ಎಂದು ಹೇಳಲು ನನಗೆ ಸಂತೋಷವಾಗಿದೆ. ರಷ್ಯಾದಿಂದ ಬಂದಿರುವ ಸೀಮಿತ ಪೂರೈಕೆಯ ಮಾರಾಟ ಮುಂದಿನ ವಾರ ಪ್ರಾರಂಭವಾಗಲಿದೆ ಎಂದು ನಾವು ಭರವಸೆ ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಸ್ಪುಟ್ನಿಕ್ ವಿ ಲಸಿಕೆಯ ಎರಡು ಡೋಸ್‌ಗಳು ಕೋವಿಡ್ ವಿರುದ್ಧ ಶೇ 91.6ರಷ್ಟು ಪರಿಣಾಮಕಾರಿ ಎಂದು ಅಧ್ಯಯನದ ವರದಿಗಳು ತಿಳಿಸಿವೆ.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...