Friday, July 11, 2025

ಆರು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಗೆ ಕೋವಿಡ್ ಎರಡನೇ ಡೋಸ್ ನೀಡಿದ ಬಗ್ಗೆ ಎಸ್.ಎಂ.ಎಸ್. 

ಬಂಟ್ವಾಳ, ಅ.26: ಆರು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯೊಬ್ಬರಿಗೆ ಕೋವಿಡ್ – 19 ಲಸಿಕೆಯ ಎರಡನೇ ಡೋಸ್ ನೀಡಲಾಗಿದೆ ಎಂಬ ಎಸ್‌.ಎಂ.ಎಸ್. ಬಂದಿದೆ ಎಂದು ಮೃತರ ಪುತ್ರ ಆರೋಪಿಸಿದ್ದಾರೆ.

ತಾಲೂಕಿನ ಮಾಣಿ ಸಮೀಪದ ಮಿತ್ತೂರು ಅಕ್ಕರೆ ನಿವಾಸಿ ಹಸೈನಾರ್ ಎಂಬವರು ಎಪ್ರಿಲ್ 27ರಂದು ಮೃತಪಟ್ಟಿದ್ದಾರೆ. ಅಕ್ಟೋಬರ್ 14ರಂದು ಅವರಿಗೆ ಕೋವಿಡ್ – 19 ಎರಡನೇ ಡೋಸ್ ನೀಡಲಾಗಿದೆ ಎಂದು ಎಸ್.ಎಂ.ಎಸ್. ಬಂದಿದೆ ಎಂದು ಮೃತ ಹಸೈನಾರ್ ಅವರ ಪುತ್ರ ಸಾದಿಕ್ ಆರೋಪಿಸಿದ್ದಾರೆ.

ತಂದೆಗೆ ಮಾರ್ಚ್ 24ರಂದು ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ – 19 ಲಸಿಕೆಯ ಪ್ರಥಮ ಡೋಸ್ ನೀಡಲಾಗಿತ್ತು. ಎಪ್ರಿಲ್ 27ರಂದು ಅವರು ಮೃತಪಟ್ಟಿದ್ದಾರೆ. ಅಕ್ಟೋಬರ್ 14ರಂದು ನನ್ನ ಮೊಬೈಲ್ ಗೆ ಒಟಿಪಿ ಬಂದಿದ್ದು ಬಳಿಕ ಎಸ್.ಎಂ.ಎಸ್. ಬಂದಿದೆ. ಎಸ್.ಎಂ.ಎಸ್. ಓದಿದಾಗ ತನ್ನ ತಂದೆಗೆ ಎರಡನೇ ಡೋಸ್ ನೀಡಲಾಗಿದೆ ಎಂದು ಇತ್ತು. ಬಳಿಕ ನಾನು ಎಸ್.ಎಂ.ಎಸ್. ಲಿಂಕ್ ಓಪನ್ ಮಾಡಿ ಪಿಡಿಎಫ್ ಪರಿಶೀಲಿಸಿದಾಗ ಅದರಲ್ಲೂ ಎರಡನೇ ಡೋಸ್ ನೀಡಿರುವ ದೃಢಪಡಿಸಲಾಗಿದೆ ಎಂದು ಸಾದಿಕ್ ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ನನ್ನ ಮೊಬೈಲ್ ಗೆ ಕರೆಯೊಂದು ಬಂದಿತ್ತು. ಕರೆ ಮಾಡಿದವರು ತಂದೆಗೆ ಎರಡನೇ ಡೋಸ್ ನೀಡುವಂತೆ ಹೇಳಿದರು. ತಂದೆ ನಿಧನರಾದ ಬಗ್ಗೆ ನಾನು ಅವರಿಗೆ ತಿಳಿಸಿದ್ದೆ. ಆದರೂ ತಂದೆಗೆ ಎರಡನೇ ಡೋಸ್ ನೀಡಿರುವ ಎಸ್.ಎಂ.ಎಸ್. ಬಂದಿರುವುದು ಹೇಗೆ ಎಂದು ನನಗೆ ತಿಳಿದಿಲ್ಲ ಎಂದು ಸಾದಿಕ್ ಹೇಳಿದ್ದಾರೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...