Wednesday, February 4, 2026

*ಮುಂದಿನ ವಾರದಿಂದ ದೇಶದಲ್ಲಿ ಸ್ಪುಟ್ನಿಕ್-ವಿ ಲಸಿಕೆ ಲಭ್ಯ*

ನವದೆಹಲಿ: ಭಾರತದಲ್ಲಿ ಕೊರೋನಾ ಸಂಕಷ್ಟದಲ್ಲಿರುವಾಗ ಈಗಾಗಲೇ ದೇಶೀಯ ಲಸಿಕೆಗಳಾದ ಕೋವಾಕ್ಸಿನ್‌, ಕೋವಿಶೀಲ್ಡ್‌ ಜನರಿಗೆ ಅಲ್ಪ ಆತಂಕ ದೂರು ಮಾಡಿದ್ದೂ, ಇದೀಗ ತುರ್ತು ಬಳಕೆಗೆ ಅನುಮೊದನೆ ಪಡೆದ ಮತ್ತೊಂದು ಲಸಿಕೆ ಸ್ಫುಟ್ನಿಕ್‌ ವಿ ರಷ್ಯಾದಿಂದ ಭಾರತಕ್ಕೆ ಬಂದು ತಲುಪಿದೆ. ಮುಂದಿನ ವಾರದಿಂದ ಭಾರತದ ಮಾರುಕಟ್ಟೆಯಲ್ಲಿ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ ಸಿಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನೀತಿ ಆಯೋಗ ಸದಸ್ಯರಾದ ಡಾ. ವಿ.ಕೆ. ಪಾಲ್ ಅವರು ಈ ಮಾಹಿತಿಯನ್ನ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಸ್ಫುಟ್ನಿಕ್‌ ಲಸಿಕೆ ಭಾರತಕ್ಕೆ ಬಂದಿದ್ದು, ಇದು ಮುಂದಿನ ವಾರ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ ಎಂದು ನಾವು ಭರವಸೆ ಹೊಂದಿದ್ದೇವೆ ಎಂದು ಹೇಳಲು ನನಗೆ ಸಂತೋಷವಾಗಿದೆ. ರಷ್ಯಾದಿಂದ ಬಂದಿರುವ ಸೀಮಿತ ಪೂರೈಕೆಯ ಮಾರಾಟ ಮುಂದಿನ ವಾರ ಪ್ರಾರಂಭವಾಗಲಿದೆ ಎಂದು ನಾವು ಭರವಸೆ ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಸ್ಪುಟ್ನಿಕ್ ವಿ ಲಸಿಕೆಯ ಎರಡು ಡೋಸ್‌ಗಳು ಕೋವಿಡ್ ವಿರುದ್ಧ ಶೇ 91.6ರಷ್ಟು ಪರಿಣಾಮಕಾರಿ ಎಂದು ಅಧ್ಯಯನದ ವರದಿಗಳು ತಿಳಿಸಿವೆ.

More from the blog

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ ಹಾಗೂ ಸಿದ್ದೀಕ್ ಸೂರ್ಯ ನೇಮಕ

ಬಂಟ್ವಾಳ : ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ, ಯುವ ಉದ್ಯಮಿ,...

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...