ಬಂಟ್ವಾಳ: ದ.ಕ.ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಹಾಗೂ ಬಂಟ್ವಾಳ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಯುವ ಬಂಟರ ಸಂಘ ಬಂಟ್ವಾಳ ತಾಲೂಕು ಹಾಗೂ ಬಿ.ಸಿ.ರೋಡು ವಲಯದ ಸಹಕಾರದೊಂದಿಗೆ ದ.ಕ.ಜಿಲ್ಲಾ ಮಟ್ಟದ ಪುರುಷರ ಹಾಗೂ ಮಹಿಳೆಯರ ವಾಲಿಬಾಲ್ ಪಂದ್ಯಾಟ ಜಿಲ್ಲಾ ಚಾಂಪಿಯನ್‌ಶಿಪ್-೨೦೨೪ ಬಿ.ಸಿರೋಡಿನ ತಲಪಾಡಿಯಲ್ಲಿ ನಡೆಯಿತು.

ದ.ಕ.ಸಂಸದ ನಳಿನ್‌ಕುಮಾರ್ ಕಟೀಲು ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಅಸೋಸಿಯೇಶನ್ ಮೂಲಕ ಇನ್ನಷ್ಟು ಇಂತಹ ಪಂದ್ಯಾಟಗಳು ನಡೆದು ಒಳ್ಳೆಯ ಕ್ರೀಡಾಪಟುಗಳನ್ನು ತಯಾರು ಮಾಡುವ ಕಾರ್ಯ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.
ಸಮಾರಂಭದಲ್ಲಿ ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ, ಮುಂಬಯಿನ ಉದ್ಯಮಿ ವಿವೇಕ್ ಶೆಟ್ಟಿ ನಗ್ರಿಗುತ್ತು, ಮುಂಬಯಿ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸಂತೋಷ್ ಜಿ.ಶೆಟ್ಟಿ ದಳಂದಿಲ, ಗೋವಾ ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಮುರಳಿಮೋಹನ್ ಶೆಟ್ಟಿ, ಬಿ.ಸಿ.ರೋಡಿನ ನ್ಯಾಯವಾದಿ ಅಶ್ವನಿಕುಮಾರ್ ರೈ, ಉದ್ಯಮಿಗಳಾದ ಡಿ.ಎಂ.ಶರೀಫ್, ಜಗನ್ನಾಥ ಚೌಟ ಬದಿಗುಡ್ಡೆ, ಜಯಪ್ರಕಾಶ್ ಜೆ.ಎಸ್, ಬಂಟ್ವಾಳ ವಾಲಿಬಾಲ್ ಅಸೋಸಿಯೇಶನ್ ಗೌರವಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಸಂಕೇಶ, ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಕಾರ್ಯದರ್ಶಿ ಶಂಕರ್ ಶೆಟ್ಟಿ ಪರಾರಿಗುತ್ತು, ಸಂಘಟನಾ ಕಾರ್ಯದರ್ಶಿ ಅಹ್ಮದ್ ಮುಸ್ತಫಾ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು.
ಪ್ರಾರಂಭದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ, ದ.ಕ.ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಸ್.ಸತೀಶ್‌ಕುಮಾರ್, ಬಂಟ್ವಾಳ ಪುರಸಭಾ ಸದಸ್ಯ ರಾಮಕೃಷ್ಣ ಆಳ್ವ ಪಿ., ಬಂಟ್ವಾಳ ಡಿವೈಎಸ್‌ಪಿ ಎಸ್.ವಿಜಯಪ್ರಸಾದ್, ದ.ಕ.ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉದ್ಯಮಿಗಳಾದ ಭುವನೇಶ್ ಪಚ್ಚಿನಡ್ಕ, ದಿವಾಕರ ಶೆಟ್ಟಿ ಪರಾರಿಗುತ್ತು, ತಲಪಾಡಿ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಇದಿನಬ್ಬ, ದ.ಕ.ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಉಪಾಧ್ಯಕ್ಷ ಸಂಶುದ್ದೀನ್ ಸುಳ್ಯ, ತಾಲೂಕು ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಸುಪ್ರಿತ್ ಆಳ್ವ, ಯುವ ಬಂಟರ ಸಂಘದ ಅಧ್ಯಕ್ಷ ನಿಶಾನ್ ಆಳ್ವ ಭಾಗವಹಿಸಿದ್ದರು.
ತಾಲೂಕು ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ ಕಾರ್ಯಕ್ರಮ ನಿರ್ವಹಿಸಿದರು.