Saturday, July 12, 2025

ಸೆ.1-3 : ವಾಮದಪದವಿನಲ್ಲಿ ಶ್ರೀ ಗೌರಿ ಗಣೇಶೋತ್ಸವ

ಬಂಟ್ವಾಳ : ಬಂಟ್ವಾಳ ತಾ| ವಾಮದಪದವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 36 ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸೆ.1 ರಿಂದ ಸೆ. 3ರವರೆಗೆ ವಾಮದಪದವು ಶ್ರೀ ಗಣೇಶ ಮಂದಿರದಲ್ಲಿ ಜರಗಲಿದೆ.
ಸೆ.೧ರಂದು ಬೆಳಗ್ಗೆ ಧ್ವಜಾರೋಹಣ, ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ. ವಿಶೇಷ ಗಣ ಹೋಮ, ಮಹಾಪೂಜೆ ಬಳಿಕ ಧಾರ್ಮಿಕ ಸಭೆ ನಡೆಯಲಿದ್ದು, ಅಖಿಲ ಭಾರತ ತುಳು ಒಕ್ಕೂಟ ಮುಂಬ ಅಧ್ಯಕ್ಷ ಧರ್ಮಪಾಲ ದೇವಾಡಿಗ ಅವರು ಅಧ್ಯಕ್ಷತೆ ವಹಿಸಲಿರುವರು. ಮಂಗಳೂರು ದುರ್ಗಾವಾಹಿನಿ ಸಂಚಾಲಕಿ ವಿದ್ಯಾ ಮಲ್ಯ ಅವರು ಧಾರ್ಮಿಕ ಭಾಷಣ ಮಾಡಲಿರುವರು. ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಭಜನೆ, ರಾತ್ರಿ ಬಳಿಕ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಪಾಂಚಜನ್ಯ-ಶಮಂತೋಪಖ್ಯಾನ ಯಕ್ಷಗಾನ ಬಯಲಾಟ ನಡೆಯಲಿದೆ.
ಸೆ.2ರಂದು ಮಧ್ಯಾಹ್ನ ಕುಟುಂಬ ಪ್ರಭೋಧನ್, ರಾತ್ರಿ ತುಳು ನಾಟಕ ಪ್ರದರ್ಶನ ನಡೆಯಲಿದೆ. ಸೆ.೩ರಂದು ಮಧ್ಯಾಹ್ನ ಸಮಾರೋಪ ನಡೆಯಲಿದೆ. ಸಂಜೆ ಧ್ವಜಾವರೋಹಣ ಬಳಿಕ ಶೋಭಾ ಯಾತ್ರೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...