Wednesday, February 12, 2025

ಪಾಣೆಮಂಗಳೂರಿನ ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಕುಸಿಯುವ ಭೀತಿ

ಬಂಟ್ವಾಳ, ಜೂ. ೧೩: ಕುಸಿಯುವ ಭೀತಿಯಲ್ಲಿದ್ದ ಪಾಣೆಮಂಗಳೂರಿನ ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ೧೫ ಮಕ್ಕಳನ್ನು ಮೊಗರ್ನಾಡುವಿನ ಹೊಸ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಯಿತು.


೧೯೭೭ರಿಂದ ಪಾಣೆಮಂಗಳೂರಿನ ಬಂಗ್ಲೆಗುಡ್ಡೆಯ ಪುರಸಭೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ವಸತಿ ನಿಲಯ ಕಳೆದ ಕೆಲವು ವರ್ಷಗಳಿಂದ ಶಿಥಿಲಾವಸ್ಥೆಗೆ ತಲುಪಿದ್ದ ಬಗ್ಗೆ ಮಾಧ್ಯಮಗಳಲ್ಲಿಯೂ ವರದಿಗಳಾಗಿತ್ತು.
ಈ ಹಾಸ್ಟೆಲ್ ಕಟ್ಟಡದ ಕೊಠಡಿಯೊಂದರ ಮೇಲ್ಛಾಚಣಿ ಕುಸಿದು ಫ್ಯಾನ್ ಏಕಾಏಕಿ ಕಳಚಿ ಬಿದ್ದಿದ್ದ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಈಗಾಗಲೇ ನಿಗದಿಪಡಿಸಿದ್ದ ಹೊಸ ಬಾಡಿಗೆ ಕಟ್ಟಡಕ್ಕೆ ಹಾಸ್ಟೆಲ್‌ನಲ್ಲಿದ್ದ ಮಕ್ಕಳನ್ನು ಗುರುವಾರ ಸ್ಥಳಾಂತರಿಸಿದ್ದಾರೆ.
ಗುರುವಾರ ಬೆಳಿಗ್ಗೆ ಹಾಸ್ಟೆಲ್‌ನಲ್ಲಿದ್ದ ಕಪಾಟುಗಳನ್ನು ಅಡಿಗೆ ಸಾಮಾಗ್ರಿಗಳನ್ನು ಕೂಡ ಸ್ಥಳಾಂತರಿಸಲಾಗಿದ್ದು, ಮಕ್ಕಳಿಗೆ ತಕ್ಕ ಮಟ್ಟಿಗೆ ಭದ್ರತೆ ದೊರೆತಂತಾಗಿದೆ.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...